HEALTH TIPS

ಕೈದಿಗಳ ಪರಾರಿ: ಡ್ರೋನ್ ಬಳಿಸಿ 13 ಮಂದಿಯನ್ನು ಮತ್ತೆ ಬಂಧಿಸಿದ ತಮಿಳುನಾಡು ಪೊಲೀಸ್

ಥೇಣಿ: ತಮಿಳುನಾಡಿನ ಅಂಡಿಪಟ್ಟಿ ಸಮೀಪ ಥೆಂಕಪಟ್ಟಿ ಉಪ ಕಾರಾಗೃಹದಿಂದ 17 ಮಂದಿ ವಿಚಾರಣಾಧೀನ ಕೈದಿಗಳು ಜೈಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಸೋಮವಾರ ತಡರಾತ್ರಿ ವೇಳೆ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣವೇ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ನಡೆಸಿ 13 ಆರೋಪಿಗಳನ್ನು ಬಂಧಿಸಲಾಗಿದೆ. 

ಉಳಿದಂತೆ 4 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಐಜಿಪಿ (ದಕ್ಷಿಣ ವಲಯ) ವಿಜಯೇಂದ್ರ ಬಿದರಿ ತಿಳಿಸಿದ್ದಾರೆ.

ಏನಿದು ಘಟನೆ?

ಕೈದಿಯೊಬ್ಬ ಅಸ್ವಸ್ಥನಾಗಿದ್ದಾನೆ ಎಂದು ಇತರೆ ಕೈದಿಗಳು ವಾರ್ಡನ್‌ಗೆ ನಂಬಿಸಿದ್ದಾರೆ. ಜೈಲು ಕೊಠಡಿಯ ಬಾಗಿಲು ತೆರೆಯುತ್ತಿದ್ದಂತೆಯೇ, ಕೈದಿಗಳು ಜೈಲಿನ ಸಿಬ್ಬಂದಿಯ ಮೇಲೆ ಏಕಾಏಕಿ ದಾಳಿ ನಡೆಸಿ, ನಂತರ ಆವರಣದಿಂದ ಪರಾರಿಯಾಗಿದ್ದಾರೆ. ಈ ವೇಳೆ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ.

ಕೈದಿಗಳು ಪರಾರಿಯಾದ ವಿಚಾರ ಖಚಿತವಾಗುತ್ತಿದ್ದಂತೆಯೇ, ‍ಪೊಲೀಸರು ಹುಡುಕಾಟ ಆರಂಭಿಸಿದ್ದರು. ನೆರೆಯ ಕೇರಳ ರಾಜ್ಯದ ಪೊಲೀಸರಿಗೂ ಮಾಹಿತಿ ನೀಡಿ, ಎಚ್ಚರಿಸಿದ್ದರು. ಪಶ್ಚಿಮ ಘಟ್ಟ ಹಾಗೂ ಇಡುಕ್ಕಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್‌ ಕಾರ್ಯಾಚರಣೆ ಆರಂಭಿಸಿದ್ದರು.

'ಕೈದಿಗಳ ಪತ್ತೆಗೆ 17 ವಿಶೇಷ ತಂಡಗಳನ್ನು ರಚಿಸಲಾಗಿದೆ. ಥೇಣಿ, ನೆರೆಯ ದಿಂಡಿಗಲ್‌ ಜಿಲ್ಲೆಯಲ್ಲಿಯೂ ನಾಕಾಬಂದಿ ನಡೆಸಿ, ವಾಹನಗಳನ್ನು ವಿಶೇಷವಾಗಿ ತಪಾಸಣೆ ನಡೆಸಲಾಗುತ್ತಿದೆ' ಎಂದು ವಿಜಯೇಂದ್ರ ಮಾಹಿತಿ ನೀಡಿದ್ದಾರೆ.

ತಪ್ಪಿಸಿಕೊಂಡವರೆಲ್ಲರೂ ಕೂಡ ನೆರೆಯ ಮದುರೆ ಹಾಗೂ ಸುತ್ತಲಿನ ಜಿಲ್ಲೆಯ ಕೈದಿಗಳಾಗಿದ್ದಾರೆ. ಜೈಲಿನಲ್ಲಿ ನಡೆದ ಭದ್ರತಾ ಲೋಪದ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.

'ಕೈದಿಗಳು ಪರಾರಿಯಾಗಿರುವುದು ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿಯಾಗಿದೆ. ಈ ಘಟನೆಯು ಆಘಾತ ಮೂಡಿಸಿದೆ' ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ತಿಳಿಸಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries