HEALTH TIPS

ಇಂಡಿಯಾ ಮೈತ್ರಿಕೂಟದ ಅರ್ಜಿಯಲ್ಲಿ 14 ಲೋಪ ಪತ್ತೆ: ಸರಿಪಡಿಸುವಂತೆ ಅರ್ಜಿದಾರರಿಗೆ CJI ಸೂರ್ಯಕಾಂತ್ ಸೂಚನೆ

ನವದೆಹಲಿ: ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ ದಿಲ್ಲಿಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿಗಳಲ್ಲಿನ ಲೋಪಗಳನ್ನು ಸರಿಪಡಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಮಂಗಳವಾರ ಅರ್ಜಿದಾರರಿಗೆ ಸೂಚಿಸಿದ್ದಾರೆ.


ಅರ್ಜಿಗಳಲ್ಲಿನ ನ್ಯೂನತೆಗಳನ್ನು ಸರಿಪಡಿಸಿದ ಬಳಿಕ ಅವುಗಳನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿಗಳು ಭರವಸೆ ನೀಡಿದ್ದಾರೆ.

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಮತ್ತು ಅಕ್ರಮಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತಿತರರು ಸಲ್ಲಿಸಿರುವ ಅರ್ಜಿಯಲ್ಲಿ 14 ಲೋಪಗಳನ್ನು ಸುಪ್ರೀಂ ಕೋರ್ಟ್ನ ರಿಜಿಸ್ಟ್ರಿ ಗುರುತಿಸಿತ್ತು. ಇದರ ಮರುದಿನವೇ ಮುಖ್ಯ ನ್ಯಾಯಮೂರ್ತಿಗಳು ಈ ನಿರ್ದೇಶನ ನೀಡಿದ್ದಾರೆ.

ಈ ಪ್ರಕರಣದಲ್ಲಿ ಸಹ-ಅರ್ಜಿದಾರರಾಗಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಗುರುತಿನ ಚೀಟಿಯ ಸ್ಪಷ್ಟ ಪ್ರತಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಿ ಸೋಮವಾರ ಅರ್ಜಿ ಸಲ್ಲಿಸಿದ ವಕೀಲರಿಗೆ ಸೂಚಿಸಿತ್ತು

ರಿಜಿಸ್ಟ್ರಿಯ ಆಕ್ಷೇಪಣೆಗಳಿಗೆ ಪ್ರತಿಕ್ರಿಯಿಸಿದ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವುತ್, ಅರ್ಜಿಯಲ್ಲಿ ಕೆಲವು ತಪ್ಪುಗಳಿರಬಹುದು. ಅವುಗಳನ್ನು ನಾವು ಈಗ ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries