HEALTH TIPS

ಬಿಹಾರ ದೋಣಿ ದುರಂತ: 15 ವರ್ಷದೊಳಗಿನ 13 ಮಕ್ಕಳು ಸಾವು, ₹6 ಲಕ್ಷ ಪರಿಹಾರ ಘೋಷಣೆ

ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಗಂಗಾ ನದಿಯಲ್ಲಿ ದೋಣಿ ಮಗುಚಿ ಬಿದ್ದು ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ.


'ದುರಂತಕ್ಕೀಡಾದ ದೋಣಿಯಲ್ಲಿ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರೆಲ್ಲರೂ 15 ವರ್ಷದೊಳಗಿನ ಮಕ್ಕಳು' ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈವರೆಗೆ ಏಳು ಮಕ್ಕಳನ್ನು ರಕ್ಷಿಸಲಾಗಿದ್ದು, ಪಾಟ್ನದ ಎನ್‌ಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ರಾಘೋಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 8.30ರ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ವರ್ಷಾ ಸಿಂಗ್ ತಿಳಿಸಿದ್ದಾರೆ.

ರಾಮ್‌ಪುರ ಶ್ಯಾಮಚಂದ್ ಗ್ರಾಮದ ನಿವಾಸಿಗಳು ನದಿಯ ಇನ್ನೊಂದು ಬದಿಯ ಗ್ರಾಮವೊಂದರಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಸ್ಥಳೀಯ ಈಜುಗಾರರ ನೆರವಿನೊಂದಿಗೆ ರಾಜ್ಯ ವಿಪತ್ತು ಸ್ಪಂದನಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಪರಿಹಾರ ಘೋಷಣೆ:

ಈ ದುರಂತಕ್ಕೆ ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸಂತಾಪ ಸೂಚಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಹ ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50000 ಪರಿಹಾರ ಘೋಷಿಸಲಾಗಿದೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries