ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯಾ ಕ್ಯಾಂಪಸ್‍ನಲ್ಲಿ ವಿಶ್ವ ವಿದ್ಯಾಲಯದ ಸಾಹಿತ್ಯ ಅಕಾಡೆಮಿ ವತಿಯಿಂದ ರಾಷ್ಟ್ರೀಯ ವಿಚಾರ ಸಂಕಿರಣ ಅ. 7ರಂದುವಿಶ್ವ ವಿದ್ಯಾಲಯ ಸಭಾಂಗಣದಲ್ಲಿಜರುಗಲಿದೆ. ಸಮಾರಂಭದಲ್ಲಿ ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರಗೀತೆ 'ವಂದೇ ಮಾತರಂ'ನ 150ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ.

