ಕಾಸರಗೋಡು: ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಸ್ನೇಹಿತ ಎನ್ನಲಾದ 18 ವರ್ಷದ ಯುವಕನ ವಿರುದ್ಧ ಬೇಡಡ್ಕ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಬೇಡಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಬ್ಬಳು ಒಂದೂವರೆ ತಿಂಗಳ ಗರ್ಭಿಣಿಯಾಗಿರುವುದು ಪ್ರಕರಣದ ಹಿನ್ನೆಲೆಯಾಗಿದೆ. ಈ ಸಂಬಂಧ ಮುಳ್ಳೇರಿಯ ನಿವಾಸಿಯಾದ 18 ವರ್ಷದ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿ ಯುವಕ ಬಾಲಕಿಯ ಮನೆಗೆ ತೆರಳಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಇತ್ತೀಚೆಗೆ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಬಳಿಕ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸೋಮವಾರ ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


