HEALTH TIPS

ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಅರಿಕ್ಕಾಡಿ ನದಿ ತೀರದಲ್ಲಿ ಕಯಾಕಿಂಗ್: ಅ. 18ರಂದು ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟನೆ

 ಕುಂಬಳೆ: ಸ್ತನ ಕ್ಯಾನ್ಸರ್ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 18ರಂದು ಅಪರಾಹ್ನ 3 ಗಂಟೆಗೆ ಅರಿಕ್ಕಾಡಿ ನದಿ ತೀರದಲ್ಲಿ ಕಯಾಕಿಂಗ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.


ಸ್ತನ ಕ್ಯಾನ್ಸರ್ ತಡೆಗಟ್ಟುವಿಕೆ ಹಾಗೂ ಆರಂಭಿಕ ಪತ್ತೆಯ ಮಹತ್ವವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ FOGSI ಸಂಸ್ಥೆಯ ಸ್ತನ ಆರೋಗ್ಯ ಸಮಿತಿಯ ನೇತೃತ್ವದಲ್ಲಿ ‘ಸ್ತನ ಆರೋಗ್ಯಕ್ಕಾಗಿ ಹುಟ್ಟು ಹಾಕೋಣ’ ಎಂಬ ಸಂದೇಶದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು, ಆರಂಭಿಕ ಹಂತದಲ್ಲೇ ರೋಗವನ್ನು ಪತ್ತೆಹಚ್ಚುವ ಅಗತ್ಯವನ್ನು ಮನವರಿಕೆ ಮಾಡಿಕೊಡುವುದು ಹಾಗೂ ಆರೋಗ್ಯಕರ ಜೀವನಶೈಲಿಗೆ ಪ್ರೋತ್ಸಾಹ ನೀಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಶಾಸಕ ಎ.ಕೆ.ಎಂ. ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕುಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಉಷಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜನಪ್ರತಿನಿಧಿಗಳು ಹಾಗೂ ಆರೋಗ್ಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಕೆ.ಒ.ಜಿ.ಎಸ್. (KOGS), ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA), ವಿಮಾ (WIMA) ಕಾಸರಗೋಡು ಘಟಕ, ಕುಂಬಳೆ ಗ್ರಾಮ ಪಂಚಾಯಿತಿ ಹಾಗೂ ಕೆ.ಪಿ.ಎಸ್. ಕಯಾಕಿಂಗ್ ಅರಿಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

‘ಸ್ತನ ಕ್ಯಾನ್ಸರ್ ನಮ್ಮ ಜೀವನವನ್ನು ನಿರ್ಧರಿಸಲು ಬಿಡಬಾರದು. ಜಾಗೃತಿ ಮತ್ತು ಆರಂಭಿಕ ತಪಾಸಣೆಯ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸಬೇಕು’ ಎಂಬುದು ಸಂಘಟಕರ ಆಶಯವಾಗಿದೆ. ಸಾರ್ವಜನಿಕರು ಹಾಗೂ ಸ್ವಯಂಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪಂಚಾಯಿತಿ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್, ಡಾ. ಉಷಾ, ಪತ್ರಕರ್ತ ಕೆ.ಎಂ. ಅಬ್ಬಾಸ್ ಅರಿಕ್ಕಾಡಿ, ಉಪಾಧ್ಯಕ್ಷೆ ಬಲ್ಕೀಸ್, ಸ್ಥಾಯಿ ಸಮಿತಿ ಅಧ್ಯಕ್ಷ ಎ.ಕೆ. ಆರಿಫ್, ಕೆ.ಪಿ. ಮುನೀರ್ ಹಾಗೂ ಅಸ್ಮಿನಾ ಅಶ್ರಫ್ ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries