HEALTH TIPS

ನ.1ರಂದು ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರ‍್ಯಾಲಿಗೆ ಪೊಲೀಸರಿಂದ ಅನುಮತಿ

ನವದೆಹಲಿ: ನವೆಂಬರ್ 1ರಂದು ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ರ‍್ಯಾಲಿಯನ್ನು ನಡೆಸಲು ಕಾಂಗ್ರೆಸ್‌ಗೆ ದಿಲ್ಲಿ ಪೊಲೀಸರು ಅನುಮತಿ ನೀಡಿದ್ದು, ಕಾರ್ಯಕ್ರಮಕ್ಕಾಗಿ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ವಿತರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಶನಿವಾರ ತಿಳಿಸಿದರು.


ಪ್ರತಿಭಟನೆಗೆ ನಿಗದಿತ ಸ್ಥಳದಲ್ಲಿ ಅ.25ರಿಂದ ನ.3ರ ನಡುವೆ ರ್ಯಾಲಿಯನ್ನು ನಡೆಸಲು ಎನ್‌ಒಸಿ ಅವಕಾಶ ನೀಡುತ್ತದೆ ಎಂದು ಕೇಂದ್ರ ವಿಭಾಗದ ಪೊಲೀಸ್ ಉಪ ಆಯುಕ್ತ ರೋಹಿತ್ ರಾಜಬೀರ್ ಸಿಂಗ್ ಹೇಳಿದರು.

ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲು, ಸಂಚಾರ ನಿರ್ವಹಣೆಯನ್ನು ಸುಗಮಗೊಳಿಸಲು ಮತ್ತು ರ್ಯಾಲಿಯು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಸಂಘಟಕರು, ಸಂಚಾರ ಪೊಲೀಸ್ ಮತ್ತು ಇತರ ಸಂಬಂಧಿತ ಏಜೆನ್ಸಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆ.30ರಂದು ನಡೆದ 'ಇಂಡಿಯಾ' ಮೈತ್ರಿಕೂಟದ ಸಭೆಯ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನ.1ರಂದು ಮತ ಕಳ್ಳತನದ ವಿರುದ್ಧ ದಿಲ್ಲಿಯಲ್ಲಿ ಬೃಹತ್ ರ್ಯಾಲಿ ನಡೆಸುವ ಯೋಜನೆಯನ್ನು ಘೋಷಿಸಿದ್ದರು.




 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries