HEALTH TIPS

ಕಾಸರಗೋಡಿನಲ್ಲಿ ಕನ್ನಡದ ಕಡೆಗಣನೆ ಖಂಡಿಸಿ ನ. 1ರಂದು ಕನ್ನಡ ಜಾಗೃತಿ ಸಮಾವೇಶ

 ಕಾಸರಗೋಡು: ಭಾಷಾವಾರು ಪ್ರಾಂತ ಪುನರ್‌ವಿಂಗಡಣೆಯ ಸಂದರ್ಭದಲ್ಲಿ ಕಾಸರಗೋಡು ಅನ್ಯಾಯವಾಗಿ ಕೇರಳಕ್ಕೆ ಸೇರ್ಪಡೆಯಾದ ಬಳಿಕ ಜಿಲ್ಲೆಯಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಮೇಲೆ ಹೆಚ್ಚುತ್ತಿರುವ ಕಡೆಗಣನೆಯನ್ನು ಖಂಡಿಸಿ ನವೆಂಬರ್ 1ರಂದು ಕಾಸರಗೋಡಿನಲ್ಲಿ ಕನ್ನಡ ಜಾಗೃತಿ ಸಮಾವೇಶ ನಡೆಯಲಿದೆ.


ಭಾರತದ ಸಂವಿಧಾನವು ಗಡಿನಾಡಿನ ಭಾಷಾ ಅಲ್ಪಸಂಖ್ಯಾತರಿಗೆ ಕೆಲವು ಸೌಲಭ್ಯಗಳನ್ನು ಒದಗಿಸಿದ್ದರೂ, ಅವುಗಳ ಸಮರ್ಪಕ ಅನುಷ್ಠಾನವಾಗುತ್ತಿಲ್ಲ ಎಂಬುದು ಕನ್ನಡಿಗರ ಆರೋಪವಾಗಿದೆ. ಸರ್ಕಾರಿ ಕಚೇರಿಗಳು ಹಾಗೂ ಹೆದ್ದಾರಿಗಳ ಬದಿಯ ನಾಮಫಲಕಗಳಲ್ಲಿ ಮಲಯಾಳಂ ಭಾಷೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಕನ್ನಡಿಗರಿಗೆ ಕನ್ನಡದಲ್ಲಿ ಅರ್ಜಿಗಳನ್ನು ಸಲ್ಲಿಸಲು ಹಾಗೂ ಮಾಹಿತಿ ಪಡೆಯಲು ಅಗತ್ಯ ಸೌಲಭ್ಯಗಳು ದೊರೆಯುತ್ತಿಲ್ಲ. ಕನ್ನಡಿಗರ ಬೇಡಿಕೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸಂಘಟಕರು ದೂರಿದ್ದಾರೆ.

ಈ ನಿರ್ಲಕ್ಷ್ಯ ಧೋರಣೆಯಿಂದ ಮುಕ್ತಿ ಪಡೆಯಲು ಕನ್ನಡಿಗರು ಒಗ್ಗಟ್ಟಾಗಿ ಧ್ವನಿ ಎತ್ತುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತಾತ್ಕಾಲಿಕವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ, ಇದರ ನಡುವೆಯೂ ಕಾಸರಗೋಡಿನ ಕನ್ನಡಿಗರ ಮೇಲೆ ಕಡ್ಡಾಯ ಮಲಯಾಳಂ ಹೇರಿಕೆಗೆ ಕ್ರಮೇಣ ಒತ್ತು ನೀಡಲಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.

ಕಡ್ಡಾಯ ಮಲಯಾಳಂ ಹೇರಿಕೆ ಹಾಗೂ ಕನ್ನಡಿಗರ ಕಡೆಗಣನೆ ವಿರುದ್ಧ ಕಾಸರಗೋಡಿನ ಕನ್ನಡಿಗರ ಪ್ರತಿನಿಧಿಗಳ ಸಭೆ ನಡೆಸಿ, ಜಿಲ್ಲೆಯ ಗ್ರಾಮಗ್ರಾಮಗಳಲ್ಲಿ ಕನ್ನಡ ಜಾಗೃತಿ ಸಮಾವೇಶಗಳನ್ನು ಆಯೋಜಿಸುವ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ.

ಹೊಸ ಬಸ್ ನಿಲ್ದಾಣದ ಬಳಿ ಸಮಾವೇಶ

ನವೆಂಬರ್ 1ರಂದು ಬೆಳಿಗ್ಗೆ 10ರಿಂದ ಕಾಸರಗೋಡಿನ ಹೊಸ ಬಸ್ ನಿಲ್ದಾಣದ ವಠಾರದಲ್ಲಿ ಕನ್ನಡ ಜಾಗೃತಿ ಸಮಾವೇಶ ನಡೆಯಲಿದೆ. ಗಡಿನಾಡಿನ ಅಪ್ಪಟ ಕನ್ನಡ ನೆಲದಲ್ಲಿ ಮಲಯಾಳಂ ಹೇರಿಕೆಯನ್ನು ವಿರೋಧಿಸುವುದು ಹಾಗೂ ಕಾಸರಗೋಡಿನ ಕನ್ನಡಿಗರಲ್ಲಿ ಕನ್ನಡ ಜಾಗೃತಿ ಮೂಡಿಸುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ.

ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ, ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸಿ ಬೆಳೆಸುವ ಪ್ರಯತ್ನಕ್ಕೆ ಕೈಜೋಡಿಸಬೇಕೆಂದು ಕರ್ನಾಟಕ ಸಮಿತಿ ಅಧ್ಯಕ್ಷ, ವಕೀಲ ಮುರಳೀಧರ ಬಳ್ಳಕ್ಕುರಾಯ ಮನವಿ ಮಾಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries