ಬದಿಯಡ್ಕ: ಕೇರಳ ಮರಾಠಿ ಶಾರದೋತ್ಸವ ಸಮಿತಿಯ 19ನೇ ವರ್ಷದ ಶಾರದೋತ್ಸವವು ಅಕ್ಟೋಬರ್ 20 ಮತ್ತು 21ರಂದು ಬದಿಯಡ್ಕ ಶ್ರೀ ಗಣೇಶ ಮಂದಿರದಲ್ಲಿ ವೇದಮೂರ್ತಿ ಶಂಕರನಾರಾಯಣ ಕೆದಿಲಾಯ ನರಂಪಾಡಿ ಅವರ ಪೌರೋಹಿತ್ಯದಲ್ಲಿ ನಡೆಯಲಿದೆ.
ಅಕ್ಟೋಬರ್ 20ರ ಕಾರ್ಯಕ್ರಮಗಳು:
ಬೆಳಿಗ್ಗೆ 6.30ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ, ಪ್ರಾರ್ಥನೆ, ಬೆಳಗಿನ ಪೂಜೆ ಹಾಗೂ ಮಹಾಗಣಪತಿ ಹೋಮ ನಡೆಯಲಿದೆ. ಬಳಿಕ ವಿವಿಧ ಭಜನಾ ಸಂಘಗಳಿಂದ ಭಜನೆ, ಬೆಳಿಗ್ಗೆ 9.30ಕ್ಕೆ ಧ್ವಜಾರೋಹಣ, 9.45ಕ್ಕೆ ಆಯುಧ ಪೂಜೆ ಹಾಗೂ ಮಕ್ಕಳ ಕಲಾ-ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ಲಲಿತಾ ಸಹಸ್ರನಾಮಾರ್ಚನೆ, ಬೆಳಿಗ್ಗೆ 11.30ಕ್ಕೆ ಸಭಾ ಕಾರ್ಯಕ್ರಮ, ಸನ್ಮಾನ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 1.10ಕ್ಕೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಹಾಗೂ ಸಂಜೆ 5ರಿಂದ ಗಜೇಂದ್ರ ಮೋಕ್ಷ ಯಕ್ಷಗಾನ ಬಯಲಾಟ ಆಯೋಜಿಸಲಾಗಿದೆ.
ಅಕ್ಟೋಬರ್ 21ರ ಕಾರ್ಯಕ್ರಮಗಳು
ಬೆಳಿಗ್ಗೆ 6.30ಕ್ಕೆ ಭಜನೆ, ಉಷಃಪೂಜೆ ಹಾಗೂ ಭಜನಾ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 10.30ಕ್ಕೆ ಲಲಿತಾ ಸಹಸ್ರನಾಮಾರ್ಚನೆ, 11 ಗಂಟೆಗೆ ಸಮಾರೋಪ ಸಮಾರಂಭ, ಆರ್. ಚಕ್ರೇಶ್ವರ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ.
ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಪ್ರಸಾದ ಭೋಜನ ನಡೆಯಲಿದ್ದು, ಮಧ್ಯಾಹ್ನ 2.30ಕ್ಕೆ ಶ್ರೀ ಶಾರದಾ ದೇವಿಯ ಶೋಭಾಯಾತ್ರೆ ಆರಂಭವಾಗಲಿದೆ.
ಬದಿಯಡ್ಕ ಶ್ರೀ ಗಣೇಶ ಮಂದಿರದಿಂದ ಹೊರಡುವ ಶೋಭಾಯಾತ್ರೆಯು ಬದಿಯಡ್ಕ ಪೇಟೆಯ ಮೂಲಕ ಪೆರಡಾಲ ವರದಾ ನದಿಯನ್ನು ತಲುಪಲಿದ್ದು, ಅಲ್ಲಿ ವಿಗ್ರಹದ ಜಲಸ್ತಂಭನ ನಡೆಯಲಿದೆ.
ಶೋಭಾಯಾತ್ರೆಯಲ್ಲಿ ಸಿಂಗಾರಿ ಮೇಳ, ಮುತ್ತುಕೊಡೆ, ಬೊಂಬೆ ಕುಣಿತ, ಸ್ತಬ್ಧಚಿತ್ರಗಳು ಹಾಗೂ ವಿವಿಧ ತಂಡಗಳಿಂದ ಕುಣಿತ ಭಜನೆ ಸೇರಿದಂತೆ ವೈವಿಧ್ಯಮಯ ಕಲಾ ಪ್ರದರ್ಶನಗಳು ನಡೆಯಲಿವೆ.

