HEALTH TIPS

₹2,000ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಸ್ವೀಕರಿಸದಿರಲು ಹೋಟೆಲ್ ಮಾಲೀಕರ ನಿರ್ಧಾರ; ಅ. 15 ರಿಂದ ಹೊಸ ನಿಯಮ ಜಾರಿ ಸಾಧ್ಯತೆ

ಕೊಟ್ಟಾಯಂ: ಯುಪಿಐ ವಹಿವಾಟುಗಳಿಗೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪವನ್ನು ವಿರೋಧಿಸಿ, ಕೇರಳದ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಅಕ್ಟೋಬರ್ 15 ರಿಂದ ₹2,000ಕ್ಕಿಂತ ಹೆಚ್ಚಿನ ಮೊತ್ತದ ಯುಪಿಐ ಪಾವತಿಗಳನ್ನು ಸ್ವೀಕರಿಸದಿರಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ.


ಯುಪಿಐ ವಹಿವಾಟುಗಳಿಗೆ ಹೆಚ್ಚುವರಿ ಶುಲ್ಕ ವಿಧಿಸುವ ನಿರ್ಧಾರವನ್ನು ಸಂಬಂಧಪಟ್ಟ ಅಧಿಕಾರಿಗಳು ಹಿಂಪಡೆಯಬೇಕು ಎಂಬುದು ಹೋಟೆಲ್ ಮಾಲೀಕರ ಪ್ರಮುಖ ಬೇಡಿಕೆಯಾಗಿದೆ. ಶುಲ್ಕ ವಿಧಿಸುವುದನ್ನು ಅನಿವಾರ್ಯಗೊಳಿಸಿದರೆ, ಅದು ₹2,000ಕ್ಕಿಂತ ಹೆಚ್ಚಿನ ವಹಿವಾಟುಗಳಿಗೆ ಅನ್ವಯಿಸುವ ಬದಲು ₹10,000ಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟುಗಳಿಗೆ ಮಾತ್ರ ಸೀಮಿತವಾಗಿರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಣ್ಣ ಮೊತ್ತದ ಡಿಜಿಟಲ್ ಪಾವತಿಗಳಿಗೆ ಹೆಚ್ಚುವರಿ ಹೊರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂಬುದು ಹೋಟೆಲ್ ಸಂಘಟನೆಗಳ ನಿಲುವಾಗಿದೆ.

ಈ ಕುರಿತು ಸರ್ಕಾರ ಅಥವಾ ಸಂಬಂಧಪಟ್ಟ ಅಧಿಕಾರಿಗಳು ತುರ್ತು ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸದಿದ್ದರೆ, ಅಕ್ಟೋಬರ್ 15ರಿಂದ ಹೊಸ ನಿಬರ್ಂಧ ಜಾರಿಗೆ ಬರಬಹುದು ಎಂದು ವರದಿಯಾಗಿದೆ.

ಈ ಕ್ರಮ ಜಾರಿಯಾದರೆ ಹೋಟೆಲ್‍ಗಳಲ್ಲಿ ಹೆಚ್ಚಿನ ಮೊತ್ತದ ಬಿಲ್ ಪಾವತಿಸಲು ಯುಪಿಐ ಬಳಸುವ ಗ್ರಾಹಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries