HEALTH TIPS

2020ರ ದಿಲ್ಲಿ ಗಲಭೆ ಪ್ರಕರಣ | ದಂಗೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಮಾಜಿ ಆಪ್ ಕೌನ್ಸಿಲರ್ ತಾಹಿರ್ ಹುಸೇನ್ ದೋಷಿ ಎಂದು ಘೋಷಿಸಿದ ಕೋರ್ಟ್

ನವದೆಹಲಿ: 2020ರ ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ದಂಗೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಆಪ್‌ ನ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಅವರನ್ನು ದೋಷಿ ಎಂದು ದಿಲ್ಲಿ ನ್ಯಾಯಾಲಯವು ಶನಿವಾರ ಘೋಷಿಸಿದೆ.


ಆದರೆ, ಅವರ ವಿರುದ್ಧದ ಇತರ ಎಲ್ಲ ಆರೋಪಗಳಿಂದ ಅವರನ್ನು ಖುಲಾಸೆಗೊಳಿಸಲಾಗಿದೆ.

ಕರ್ಕರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರು, ಇತರ ಸಹಆರೋಪಿಗಳನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದು ಹುಸೇನ್ ವಿರುದ್ಧದ ಎರಡನೇ ದೋಷನಿರ್ಣಯವಾಗಿದೆ. ಗುಪ್ತಚರ ಇಲಾಖೆ (ಐಬಿ) ಸಿಬ್ಬಂದಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಅವರನ್ನು ಈಗಾಗಲೇ ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಗಲಭೆಯಲ್ಲಿ ಅನೇಕರು ಸಾವನ್ನಪ್ಪಿದ್ದು, ವ್ಯಾಪಕ ಆಸ್ತಿಪಾಸ್ತಿ ನಷ್ಟ ಸಂಭವಿಸಿತ್ತು.

2023ರ ಆಗಸ್ಟ್‌ನಲ್ಲಿ ವಿಚಾರಣೆ ವೇಳೆ ನ್ಯಾಯಾಲಯವು, ಫೆಬ್ರವರಿ 2020ರ ಗಲಭೆಯ ಸಂದರ್ಭದಲ್ಲಿ ತಾಹಿರ್ ಹುಸೇನ್ ತಮ್ಮ ಮನೆಯ ಮೇಲ್ಛಾವಣಿಯ ಮೇಲೆ ನಿಂತು ಅಂಗಡಿಗಳ ಮೇಲೆ ದಾಳಿ ಮಾಡಲು ಜನರನ್ನು ಪ್ರಚೋದಿಸಿದ್ದರು ಎಂಬುದನ್ನು ಗಮನಕ್ಕೆ ತೆಗೆದುಕೊಂಡಿತ್ತು. ಹುಸೇನ್ ಅವರ ಮನೆಯ ಮೇಲ್ಛಾವಣಿಯಿಂದ ಕಲ್ಲು ಹಾಗೂ ಪೆಟ್ರೋಲ್ ಬಾಂಬ್‌ ಗಳನ್ನು ಎಸೆಯಲಾಗಿತ್ತು ಎಂದು ಸಾಕ್ಷಿಗಳು ತಿಳಿಸಿದ್ದರು. ಈ ಆಧಾರದ ಮೇಲೆ ಗಲಭೆ ಮತ್ತು ಬೆಂಕಿ ಹಚ್ಚುವಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಮೇಲ್ನೋಟಕ್ಕೆ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ತಿಳಿಸಿತ್ತು.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries