HEALTH TIPS

ಮಂಜೇಶ್ವರದಲ್ಲಿ 'ಪುವೆಂಪು ನೆನಪು 2026' ಸಮಾರಂಭ 24 ರಂದು: ಗಣ್ಯರ ಉಪಸ್ಥಿತಿ, ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ರಿಗೆ ಸನ್ಮಾನ

ಮಂಜೇಶ್ವರ: ತುಳುರತ್ನ, ಬಹುಭಾಷಾ ವಿದ್ವಾಂಸ ಡಾ. ಪಿ. ವೆಂಕಟರಾಜ ಪುಣಿಂಚಿತ್ತಾಯರ(ಪುವೆಂಪು) ಸ್ಮರಣಾರ್ಥ 'ಪುವೆಂಪು ನೆನಪು 2026' ಸಮಾರಂಭ ವಿವಿಧ ಸಾಂಸ್ಕøತಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗೆ ಅ.24 ರಂದು ಬೆಳಿಗ್ಗೆ 9 ರಿಂದ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಗಿಳಿವಿಂಡಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದೆ. 


ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಹಿರಿಯ ಸಾಹಿತಿ, ನಿರ್ದೇಶಕ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಅವರಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ. ಎಂ. ವೀರಪ್ಪ ಮೊಯ್ಲಿ ಅವರು ಶಾಫಿ ಬಂಡಸಾಲ ದುಬೈ ಅವರ 'ಹೃದಯಗೀತೆ' ಕೃತಿ ಬಿಡುಗಡೆ ಮಾಡಲಿದ್ದು, ವಕೀಲ ಎಂ.ಎಸ್. ಥೋಮಸ್ ಡಿಸೋಜ ಕೃತಿ ಪರಿಚಯಿಸಲಿದ್ದಾರೆ.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಕುಂಟಾರು ರವೀಶ ತಂತ್ರಿ ಸ್ವಾಗತಿಸಲಿದ್ದು, ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷ ಯು.ಕೆ. ಸೈಫುಲ್ಲಾ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡುವರು. ಡಾ. ರತ್ನಾಕರ ಮಲ್ಲಮೂಲೆ 'ಕುವೆಂಪು ನೆನಪು' ಉಪನ್ಯಾಸ ನೀಡುವರು. 

ಮುಖ್ಯ ಅತಿಥಿಗಳಾಗಿ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ, ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಜಿಲ್ಲಾ ಪಂಚಾಯತಿ ಸದಸ್ಯೆ ಇರ್ಫಾನ ಇಕ್ಬಾಲ್, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಶೋಕ ಚಂದರಗಿ, ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ, ಪತ್ರಕರ್ತರ ಸಂಘದ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕಸಾಪ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಎನ್. ಚನಿಯಪ್ಪ ನಾಯ್ಕ, ಜಾನಪದ ಪರಿಷತ್ತಿನ ಕೇರಳ ಘಟಕಾಧ್ಯಕ್ಷ ಡಾ. ಮಲ್ಲಿಕಾರ್ಜುನ ಎಸ್. ನಾಸಿ ಕೊಚ್ಚಿನ್, ಯಕ್ಷಗಾನ ಅಕಾಡೆಮಿ ಸದಸ್ಯ ಸಂಕಬ್ಬೆಲು ಸತೀಶ್ ಅಡಪ ಹಾಗೂ ಹನೀಫ್ ಪಡಿಞರ್ ಉಪಸ್ಥಿತರಿರುವರು. 

ಪುವೆಂಪು ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿಜಯರಾಜ ಪುಣಿಂಚಿತ್ತಾಯ ವಂದಿಸುವರು. ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಕಾರ್ಯಕ್ರಮ ನಿರೂಪಿಸುವರು. ಡಾ. ನಾಗೇಶ್ ಕೆ.ಎನ್. ನೇತೃತ್ವದಲ್ಲಿ ಸೂರೆಂಬೈಲು ಕಣ್ಮಣಿ ತಂಡದ ನೃತ್ಯ ವೈಭವ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries