HEALTH TIPS

ಕಾಸರಗೋಡು ಪೇಟೆ ವೆಂಕಟರಮಣ ಕ್ಷೇತ್ರದಲ್ಲಿ ‘ದಸರಾ–2026’ ಸಂಭ್ರಮ

ಕಾಸರಗೋಡು: ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಮತ್ತು ಪೇಟೆ ಶ್ರೀ ವೆಂಕಟರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಕಲಾಸಂಘ, ಕಾಸರಗೋಡು ಇವರ ಜಂಟಿ ಆಶ್ರಯದಲ್ಲಿ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ವ್ಯಾಸಮಂಟಪದಲ್ಲಿ ‘ಕಾಸರಗೋಡು ದಸರಾ–2026’ ಕಾರ್ಯಕ್ರಮ ವಿಶಿಷ್ಟವಾಗಿ ನಡೆಯಿತು.


ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿವಿಧ ಕಲಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭದ ಆಕರ್ಷಣೆಯಾಗಿದ್ದವು.

ಕಾಸರಗೋಡಿನ ಖ್ಯಾತ ದಂತವೈದ್ಯೆ ಡಾ. ಮಹೇಶ್ವರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ವೆಂಕಟರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಕಲಾಸಂಘದ ವ್ಯವಸ್ಥಾಪಕ ಡಾ. ಕೆ.ಎನ್. ವೆಂಕಟರಮಣ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು.

ಸಾಧಕರಿಗೆ ದಸರಾ ಗೌರವ

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್–2026ರಲ್ಲಿ ದಾಖಲೆ ನಿರ್ಮಿಸಿದ ಪ್ರತಿಭೆ ಮಿನ್ಹಾ ಎಂ. ಹಾಗೂ ಕಾಸರಗೋಡು ನಗರಸಭೆಯ 33ನೇ ವಾರ್ಡ್‌ನ ಹರಿತ ಕರ್ಮಸೇನಾ ಸಿಬ್ಬಂದಿಗಳಾದ ತುಳಸಿ, ವೀಣಾ, ಅಜಿತಾ ಮತ್ತು ರಾಜಶ್ರೀ ಅವರನ್ನು ಕಾರ್ಯಕ್ರಮದಲ್ಲಿ ದಸರಾ ಗೌರವ ನೀಡಿ ಸನ್ಮಾನಿಸಲಾಯಿತು.

ಕಾಸರಗೋಡು ನಗರಸಭೆ ಸದಸ್ಯ ಕೆ.ಎನ್. ರಾಮಕೃಷ್ಣ ಹೊಳ್ಳ ಮತ್ತು ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ, ಕಾಸರಗೋಡಿನ ಸಂಚಾಲಕ ಕೆ. ಗುರುರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವೆಂಕಟರಮಣ ಬಾಲಗೋಕುಲದ ಮಕ್ಕಳು ‘ವಂದೇ ಮಾತರಂ’ ಗೀತೆಯನ್ನು ಹಾಡಿದರು. ಕೋಟೆಕಣಿ ಶ್ರೀ ರಾಮನಾಥ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತ ವೀಜಿ ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು. ಕಿಶೋರ್ ಕೆ.ಎಸ್.ವಿ.ಟಿ. ವಂದಿಸಿದರು.

ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆಯ ವತಿಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಲಾ ವೈಭವ ಮತ್ತು ಕಲಾವಿದರ ಪ್ರತಿಭಾ ಪ್ರದರ್ಶನ ನಡೆಯಿತು. ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿಯ ಸಂಭ್ರಮಕ್ಕೆ ಕಾರ್ಯಕ್ರಮ ವೇದಿಕೆಯಾಯಿತು.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries