HEALTH TIPS

ರಷ್ಯಾ: ಕಪ್ಪು ಸಮುದ್ರದಲ್ಲಿ ಹಡಗಿನ ಮೇಲೆ ಡ್ರೋನ್ ದಾಳಿ, 23 ಭಾರತೀಯರ ರಕ್ಷಣೆ

ಮಾಸ್ಕೊ: ರಷ್ಯಾದ ಕಪ್ಪು ಸಮುದ್ರದ ಕರಾವಳಿಯಲ್ಲಿ ಸಂಚರಿಸುತ್ತಿದ್ದ ಲೈಬೀರಿಯಾ ಧ್ವಜ ಹೊಂದಿದ್ದ ತೈಲ ಸಾಗಣೆ ಹಡಗಿನ ಮೇಲೆ ಡ್ರೋನ್‌ ದಾಳಿ ನಡೆದಿದ್ದು, ಹಡಗಿನಲ್ಲಿದ್ದ 23 ಭಾರತೀಯ ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ. 


ಹಡಗಿನಲ್ಲಿದ್ದ ಎಲ್ಲ ಸಿಬ್ಬಂದಿಯನ್ನು ರಕ್ಷಿಸಿ, ಸುರಕ್ಷಿತವಾಗಿ ದಡಕ್ಕೆ ಕರೆತರಲಾಗಿದೆ ಎಂದು ರಷ್ಯಾದ ಸಾರಿಗೆ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. 

'ಅಫ್ರಾಮ್ಯಾಕ್ಸ್‌ ರಿಯೊ' ಹೆಸರಿನ ತೈಲ ಟ್ಯಾಂಕರ್‌ ಮೇಲೆ ಮಂಗಳವಾರ ಮಾನವರಹಿತ ಸರ್ಫೆಸ್ ವೆಸೆಲ್ಸ್ ಮೂಲಕ ದಾಳಿ ನಡೆದಿದ್ದು, ಪರಿಣಾಮವಾಗಿ ಕಪ್ಪು ಸಮುದ್ರದ ಕರಾವಳಿಯಲ್ಲಿ ಭಾರಿ ಬೆಂಕಿ ಆವರಿಸಿತ್ತು.

ಹಡಗಿನಲ್ಲಿದ್ದ ಎಲ್ಲ 23 ಮಂದಿ ಭಾರತೀಯ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಯಾರಿಗೂ ಗಾಯಗಳಾಗಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳು ಹಾಗೂ ಬಂದರುಗಳ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದು, ಜಾಗತಿಕ ವ್ಯಾಪಾರ ವಹಿವಾಟಿಗೆ ಭಾರಿ ಹಿನ್ನಡೆಯಾಗುತ್ತಿದೆ.

ಎರಡು ದಿನಗಳ ಹಿಂದಷ್ಟೇ ಕಪ್ಪು ಸಮುದ್ರದಲ್ಲಿ ಟರ್ಕಿ ಮಾಲೀಕತ್ವದ ಸರಕು ಸಾಗಣೆ ಹಡಗಿನ ಮೇಲೆ ರಷ್ಯಾದ ಡ್ರೋನ್ ದಾಳಿ ನಡೆದು ಕನಿಷ್ಠ ಇಬ್ಬರು ಮೃತಪಟ್ಟಿದ್ದರು. ಆ ಘಟನೆಯಲ್ಲಿ ಓರ್ವ ಭಾರತೀಯ ಸೇರಿದಂತೆ ಹಲವರು ಗಾಯಗೊಂಡಿದ್ದರು.

ಭಾರತ ಕಳವಳ:

ವಾಣಿಜ್ಯ ಹಡಗುಗಳು ಹಾಗೂ ನಾವಿಕರ ಮೇಲಿನ ಸರಣಿ ದಾಳಿಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. 'ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದು ಜಾಗತಿಕ ವಾಣಿಜ್ಯ ಹಾಗೂ ಜನರ ಹಿತಾಸಕ್ತಿಗೆ ಧಕ್ಕೆಯಾಗಿದೆ. ಸಂಘರ್ಷಕ್ಕೆ ಅಂತ್ಯಹಾಡಲು ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳೇ ಪರಿಹಾರ ಎಂಬುದನ್ನು ಭಾರತ ಪುನರುಚ್ಚರಿಸುತ್ತದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries