ಕಾಸರಗೋಡು: ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನಲ್ಲಿ ನಡೆದ 'ವಂದೇ ಮಾತರಂ' ರಾಷ್ಟ್ರೀಯ ವಿಚಾರ ಸಂಕಿರಣದ ವೇಳೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 25ಮಂದಿ ವಿದ್ಯಾರ್ಥಿಗಳ ವಿರುದ್ಧ ಬೇಕಲ ಠಾಣೆ ಪೆÇಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ವಿಚಾರ ಸಂಕಿರಣ ನಡೆಯುತ್ತಿದ್ದ ವೇದಿಕೆ ಮುಂಭಾಗದಲ್ಲಿ ಗುಂಪುಸೇರಿ ಕಾರ್ಯಕ್ರಮವನ್ನು ಅಸ್ತವ್ಯಸ್ತಗೊಳಿಸಿದ ಆರೋಪವನ್ನು ಎಫ್‍ಐಆರ್‍ನಲ್ಲಿ ಉಲ್ಲೇಖಿಸಲಾಗಿದೆ.


