HEALTH TIPS

ಗೋವಾ | ಹಿಂದುತ್ವ ವಿರೋಧಿ ಘೋಷಣೆ ಆರೋಪ: 300 ಸಿಜೆಪಿ ಪ್ರತಿಭಟನಾಕಾರರ ವಿರುದ್ದ FIR

ಗೋವಾ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 11ರಂದು ಪಣಜಿಯಲ್ಲಿ ನಡೆದ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಘೋಷಣೆಗಳನ್ನು ಕೂಗಲಾಗಿದೆ ಎಂಬ ಆರೋಪದ ಮೇಲೆ ಗೋವಾ ಪೊಲೀಸರು 300 ಅಪರಿಚಿತ ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. 


ಪ್ರತಿಭಟನೆಯಲ್ಲಿ ಸಿಜೆಪಿ ಪದಾಧಿಕಾರಿಗಳು ಹಾಗೂ ಬೆಂಬಲಿಗರು 'ಮುರ್ದಾಬಾದ್, ಮುರ್ದಾಬಾದ್, ಹಿಂದುತ್ವ ಮುರ್ದಾಬಾದ್' ಎಂಬ ಘೋಷಣೆಗಳನ್ನು ಕೂಗುವ ಮೂಲಕ ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ ತಂದಿದ್ದಾರೆ ಮತ್ತು ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಉದ್ದೇಶಪೂರ್ವಕವಾಗಿ ನೋವುಂಟು ಮಾಡಿದ್ದಾರೆ ಎಂದು ಪಣಜಿ ಪೊಲೀಸ್ ಇನ್‌ಸ್ಪೆಕ್ಟರ್ ವಿಜಯಕುಮಾರ್ ಚೋಡಣ್ಕರ್ ತಿಳಿಸಿದ್ದಾರೆ.

ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ ತರುವುದು ಹಾಗೂ ಧಾರ್ಮಿಕ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ಕೆರಳಿಸುವ ಆರೋಪಗಳ ಸಂಬಂಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್‌ 196 ಮತ್ತು 299ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಘಟನೆ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದರು. ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನಗಳನ್ನು ಸರಕಾರ ಸಹಿಸುವುದಿಲ್ಲ ಎಂದೂ ಹೇಳಿದ್ದರು.

ಸಾಮಾಜಿಕ ಜಾಲತಾಣದ ವಿಡಿಯೊ ಆಧರಿಸಿ ದೂರು

ತಲೇಗಾಂವ್ ನಿವಾಸಿ ರಾಮಪ್ರಸಾದ್ ಕೆಲ್ಕರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಅಕ್ಟೋಬರ್ 11ರ ಪ್ರತಿಭಟನೆಯ ವಿಡಿಯೊವನ್ನು ಉಲ್ಲೇಖಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೇಶದಾದ್ಯಂತ ಮತದಾರರ ಪಟ್ಟಿಯಲ್ಲಿನ ಅಕ್ರಮಗಳು ಹಾಗೂ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತದಾರರ ಹೆಸರುಗಳನ್ನು ಅಳಿಸಿರುವುದನ್ನು ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಪ್ರತಿಭಟನೆ ಆಯೋಜಿಸಿತ್ತು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಸಿಜೆಪಿಯ ಮಹಿಳಾ ಸಂಯೋಜಕರೊಬ್ಬರು ಪ್ರತಿಭಟನೆಗೆ ಅನುಮತಿ ಕೋರಿ ಉತ್ತರ ಗೋವಾ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಆ ಅರ್ಜಿಯನ್ನು ತಿರಸ್ಕರಿಸಲಾಗಿತ್ತು ಎಂಬುದೂ ತಮ್ಮ ಗಮನಕ್ಕೆ ಬಂದಿದೆ ಎಂದು ಕೆಲ್ಕರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries