ಮ್ಯಾಡ್ರಿಡ್: ಸ್ಪೇನ್ನ ಟೊಲೆಡೊ ನಗರದ ಬಳಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಕನಿಷ್ಠ 30 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮ್ಯಾಡ್ರಿಡ್ನಿಂದ ಸೆವಿಲ್ಲೆಗೆ ತೆರಳುತ್ತಿದ್ದ ಎವಿಇ ಹೈಸ್ಪೀಡ್ ರೈಲು ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇರಿಯೊ ರೈಲಿನ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ಹಿನ್ನೆಲೆಯಲ್ಲಿ ಮ್ಯಾಡ್ರಿಡ್ನಿಂದ ದಕ್ಷಿಣದ ಅಂಡಲೂಸಿಯಾ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗದ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.



