ಕನಿಷ್ಠ ಪ್ರಯಾಣ ದರ 15 ರೂಪಾಯಿಗೆ ಹೆಚ್ಚಳ, ವಿದ್ಯಾರ್ಥಿಗಳ ರಿಯಾಯಿತಿ ದರ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಕೊಚ್ಚಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇರಳ ರಾಜ್ಯದಲ್ಲಿ ನವೆಂಬರ್ 3ರಿಂದ ಖಾಸಗಿ ಬಸ್ಗಳು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿವೆ.
ಕನಿಷ್ಠ ಪ್ರಯಾಣ ದರವನ್ನು 15 ರೂಪಾಯಿಗೆ ಹೆಚ್ಚಿಸಬೇಕು, ವಿದ್ಯಾರ್ಥಿಗಳ ಪ್ರಯಾಣ ರಿಯಾಯಿತಿ ದರವನ್ನು ಪರಿಷ್ಕರಿಸಿ ಹೆಚ್ಚಿಸಬೇಕು ಹಾಗೂ ಪ್ರಿಯದರ್ಶಿನಿ ಬಸ್ಗಳ ಸೇವೆಯಿಂದ ಖಾಸಗಿ ಬಸ್ಗಳಿಗೆ ಉಂಟಾಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂಬುದು ಬಸ್ ಮಾಲೀಕರ ಪ್ರಮುಖ ಬೇಡಿಕೆಗಳಾಗಿವೆ.
ಕೊಚ್ಚಿಯಲ್ಲಿ ನಡೆದ ಖಾಸಗಿ ಬಸ್ ಮಾಲೀಕರ ವಿವಿಧ ಸಂಘಟನೆಗಳ ಸಮನ್ವಯ ಸಭೆಯಲ್ಲಿ ಮುಷ್ಕರ ನಡೆಸುವ ನಿರ್ಧಾರವನ್ನು ಪ್ರಕಟಿಸಲಾಗಿದೆ.
ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರ ಆರಂಭವಾದರೆ ರಾಜ್ಯದ ಖಾಸಗಿ ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.



