HEALTH TIPS

ಹಿಮಾಚಲ ಪ್ರದೇಶ| ಶಿಮ್ಲಾ ಜಿಲ್ಲೆಯಲ್ಲಿ 4.1 ತೀವ್ರತೆಯ ಭೂಕಂಪ

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಶನಿವಾರ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ (ಎನ್‌ಸಿಸಿ) ಬಿಡುಗಡೆ ಮಾಡಿದ ದತ್ತಾಂಶದಿಂದ ತಿಳಿದು ಬಂದಿದೆ.


ಭೂಕಂಪನವು ಭಾರತೀಯ ಕಾಲಮಾನ ಮುಂಜಾನೆ 4.36ಕ್ಕೆ 10 ಕಿ.ಮೀ. ಆಳದಲ್ಲಿ ಸಂಭವಿಸಿದೆ. ಇದರ ಕೇಂದ್ರ ಬಿಂದು 31,298 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 77.529 ಡಿಗ್ರಿ ಪೂರ್ವ ರೇಖಾಂಶದಲ್ಲಿದ್ದು, ಶಿಮ್ಲಾ ಜಿಲ್ಲೆಯ ರೋಹ್ರುವಿನಿಂದ ಸುಮಾರು 24 ಕಿ.ಮೀ. ದೂರದಲ್ಲಿತ್ತು.

ಇತ್ತೀಚೆಗಿನ ವಾರಗಳಲ್ಲಿ ಉತ್ತರ ಭಾರತದಾದ್ಯಂತ ವರದಿಯಾದ ಸರಣಿ ಭೂಕಂಪಗಳ ನಡುವೆಯೇ ಈ ಭೂಕಂಪ ಸಂಭವಿಸಿದೆ. ಈ ತಿಂಗಳ ಆರಂಭದಲ್ಲಿ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹಿಮಾಲಯ ಪ್ರದೇಶದಲ್ಲಿ ಭೂಕಂಪನ ಚಟುವಟಿಕೆಗಳ ಕುರಿತು ಹೆಚ್ಚಿನ ಗಮನ ಸೆಳೆದಿತ್ತು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries