HEALTH TIPS

ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!

 ಲಖನೌ: ಸೈನಿಕನ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆ್ಯಂಬುಲೆನ್ಸ್ ಚಾಲಕ ಸೇರಿದಂತೆ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 


ಘಟನೆ ಭಾನುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯ 79.6 ಕಿ.ಮೀ. ಬಳಿ, ಅಯೋಧ್ಯಾ-ಸುಲ್ತಾನ್‌ಪುರ ಗಡಿಯ ಸಮೀಪದ ಹಲಿಯಾಪುರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಬೇದಾರ್ ಮೇಜರ್ ಸತ್ಯವಾನ್ ಅವರ ಪಾರ್ಥಿವ ಶರೀರವನ್ನು ಚಂಡೀಗಢದಿಂದ ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯಲ್ಲಿರುವ ಅವರ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಅವರ ಕುಟುಂಬದ ಸದಸ್ಯರು ಕೂಡ ಆ್ಯಂಬುಲೆನ್ಸ್‌ನಲ್ಲಿ ಜೊತೆಯಾಗಿದ್ದರು. ಇದೇ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಮೃತ ಸುಬೇದಾರ್ ಮೇಜರ್ ಸತ್ಯವಾನ್ ಅವರು ದೇವರಿಯಾ ಜಿಲ್ಲೆಯ ರುದ್ರಪುರ ಪ್ರದೇಶದ ಗಲಿಯಾ ದುಧೈಲ್ಲಾ ಗ್ರಾಮದ ನಿವಾಸಿಯಾಗಿದ್ದರು. ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುವ ವೇಳೆ ಕುಟುಂಬದ ಸದಸ್ಯರು ಈ ದುರಂತಕ್ಕೆ ಸಿಲುಕಿದ್ದಾರೆ.

ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ, ಒಂದು ಕುಟುಂಬದ ಗಂಡು ಸಂತತಿಯೇ ನಾಶ!

ಪೊಲೀಸರ ಪ್ರಕಾರ, ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆ್ಯಂಬುಲೆನ್ಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಲ್ಲಿ ಸೈನಿಕನ ಪುತ್ರ ಗೌರವ್ ಸಿಂಗ್ (28) ಹಾಗೂ ಆ್ಯಂಬುಲೆನ್ಸ್ ಚಾಲಕ ಜಸ್ಪಾಲ್ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾತ್ರವಲ್ಲದೇ ಸೈನಿಕನ ಸಹೋದರ ರಾಜನ್ ಚೌಧರಿ (35) ಹಾಗೂ ಸೋದರಳಿಯ ರಾಮ್ ಸಮುಜ್ ಸಿಂಗ್ (40) ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಬಳಿಕ ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ಸುಬೇದಾರ್ ಮೇಜರ್ ಸತ್ಯವಾನ್ ಅವರ ಪಾರ್ಥಿವ ಶರೀರವನ್ನು ಮುಂದಿನ ವ್ಯವಸ್ಥೆಗಳಿಗಾಗಿ ಹಲಿಯಾಪುರ ಪೊಲೀಸ್ ಠಾಣೆ ಆವರಣದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ

ಅಪಘಾತದ ಮಾಹಿತಿ ತಿಳಿದ ಬಳಿಕ ಸುಲ್ತಾನ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ಹಾಗೂ ಜಿಲ್ಲಾಧಿಕಾರಿ ಇಂದ್ರಜೀತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries