HEALTH TIPS

ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವ: ಸಂಘಟನಾ ಸಮಿತಿ ರಚನಾ ಸಭೆ ಅಕ್ಟೋಬರ್ 5 ರಂದು

ಬದಿಯಡ್ಕ: 2026-27ನೇ ಸಾಲಿನ ಕುಂಬಳೆ ಉಪಜಿಲ್ಲಾ ಕೇರಳ ಶಾಲಾ ಕಲೋತ್ಸವದ ಸಂಘಟನಾ ಸಮಿತಿ ರಚನಾ ಸಭೆ ಅ. 5 ರಂದು ಮಧ್ಯಾಹ್ನ 2:ಕ್ಕೆ ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಎಲ್‍ಪಿ, ಯುಪಿ, ಹೈಸ್ಕೂಲ್ ಹಾಗೂ ಹೈಯರ್ ಸೆಕೆಂಡರಿ ವಿಭಾಗಗಳಿಂದ ಸುಮಾರು 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿರುವ ಈ ಬೃಹತ್ ಕಲಾಮೇಳವನ್ನು ಅತ್ಯಂತ ಯಶಸ್ವಿಯಾಗಿ ಸಂಘಟಿಸುವ ಸಲುವಾಗಿ ಈ ಸಭೆಯನ್ನು ಕರೆಯಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಸ್ಥಳೀಯರ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರ ಅಗತ್ಯವಾಗಿದ್ದು, ಕುಟುಂಬಶ್ರೀ ಯೂನಿಟ್‍ಗಳು, ಸ್ಥಳೀಯ ಕ್ಲಬ್‍ಗಳು, ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ-ಸಹಕಾರ ನೀಡಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries