HEALTH TIPS

ಚುನಾವಣಾ ಆಯೋಗದ ಕಚೇರಿ ಬಳಿ ಅ.7ರಂದು ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದ ಪ್ರತಿಭಟನೆ

ನವದೆಹಲಿ: ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಚುನಾವಣಾ ಆಯೋಗದ ಕಚೇರಿಯ ಹೊರಗೆ ಬುಧವಾರ(ಅ.7) ಜಂಟಿ ಪ್ರತಿಭಟನೆ ನಡೆಸುತ್ತೇವೆ ಎಂದು 'ಇಂಡಿಯಾ' ಮೈತ್ರಿಕೂಟ ತಿಳಿಸಿದೆ.


ಕಾಂಗ್ರೆಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್‌ಎಸ್‌ಪಿ) ಸೇರಿದಂತೆ 'ಇಂಡಿಯಾ' ಮೈತ್ರಿಕೂಟದ ದೆಹಲಿ ಘಟಕದ ವಿವಿಧ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಕುರಿತು ಮಾತನಾಡಿರುವ ದೆಹಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನಿಲ್ ಭಾರದ್ವಾಜ್, 'ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸಲು ಮತ್ತು ಅದನ್ನು ತಕ್ಷಣವೇ ಹಿಂಪಡೆಯುವಂತೆ ಆಗ್ರಹಿಸಲು ಎಲ್ಲ ಪಕ್ಷಗಳು ನಿರ್ಧರಿಸಿವೆ' ಎಂದು ಹೇಳಿದ್ದಾರೆ.

ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಮತದಾರರ ಹೆಸರುಗಳನ್ನು ತೆಗೆದುಹಾಕುವ ಅಥವಾ ಅವರ ಹಕ್ಕುಗಳಿಗೆ ಧಕ್ಕೆ ತರುವಂತಹ ಯಾವುದೇ ಪ್ರಕ್ರಿಯೆಯನ್ನು ಅಳವಡಿಸಿಕೊಂಡರೆ, ಅದನ್ನು 'ಇಂಡಿಯಾ' ಮೈತ್ರಿಕೂಟ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಬೇಕು ಹಾಗೂ ಮತದಾರರ ಹಕ್ಕುಗಳಿಗೆ ಅನುಗುಣವಾಗಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಭೆಯಲ್ಲಿ ಕಾಂಗ್ರೆಸ್ ನಾಯಕರ ಜೊತೆಗೆ ಸಿಪಿಐ ಕಾರ್ಯದರ್ಶಿ ದಿನೇಶ್ ಸಿ ವರ್ಷ್ನೆ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಅನುರಾಗ್ ಸಕ್ಸೇನಾ, ಆರ್‌ಜೆಡಿಯ ನಾವಲ್ ಕಿಶೋರ್ ಹಾಗೂ ಎನ್‌ಸಿಪಿ ಮತ್ತು ಆರ್‌ಎಸ್‌ಪಿ ಪ್ರತಿನಿಧಿಗಳು ಭಾಗವಹಿಸಿದ್ದರು. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries