HEALTH TIPS

ವಯಸ್ಸು 82 , ಬಂಧನದ ಭೀತಿ: ಪಿಣರಾಯಿ ವಿಜಯನ್‌ಗೆ ಇಡಿ ನೋಟಿಸ್; ಮುಂದಿನ ವಾರ ವಿಚಾರಣೆಗೆ ಹಾಜರಾಗಲು ಸೂಚನೆ


​​ಕೊಚ್ಚಿ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಬಿಗ್ ಶಾಕ್ ನೀಡಿದೆ. ಮುಂದಿನ ವಾರ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಇದರಿಂದಾಗಿ ಅವರು ಏಕಕಾಲದಲ್ಲಿ ಕೇಂದ್ರ ಹಾಗೂ ರಾಜ್ಯ ತನಿಖಾ ಸಂಸ್ಥೆಗಳೆರಡರ ತನಿಖೆಯನ್ನೂ ಎದುರಿಸಬೇಕಾದ ಇಕ್ಕಟ್ಟಿಗೆ ಸಿಲುಕಿದ್ದಾರೆ.

​ಸಿಎಂಆರ್‌ಎಲ್ (CMRL) – ಎಕ್ಸಾಲಾಜಿಕ್ ಆರ್ಥಿಕ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಈ ಹಿಂದೆ ಕೇರಳ ಹೈಕೋರ್ಟ್ ಆದೇಶಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಿಣರಾಯಿ ಸೇರಿದಂತೆ ಇತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ತಿರಸ್ಕರಿಸಿದ ಬೆನ್ನಲ್ಲೇ, ವಿಜಿಲೆನ್ಸ್ ತನಿಖೆ ತೀವ್ರಗೊಂಡಿದೆ. ಇದರ ನಡುವೆಯೇ ಇದೀಗ ಇಡಿ ಕೂಡ ಸಮನ್ಸ್ ಜಾರಿ ಮಾಡಿದೆ.

​ಸುಪ್ರೀಂ ಕೋರ್ಟ್‌ನಲ್ಲಿ ವಕೀಲರ ವಾದ:

ಮತ್ತೊಂದೆಡೆ, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಪಿಣರಾಯಿ ವಿಜಯನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ತುರ್ತು ವಿಚಾರಣೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಅವರ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿ, "ಪಿಣರಾಯಿ ವಿಜಯನ್ ಅವರಿಗೆ ಈಗ 82 ವರ್ಷ ವಯಸ್ಸಾಗಿದ್ದು, ತನಿಖಾ ಸಂಸ್ಥೆಗಳು ಅವರನ್ನು ಬಂಧಿಸುವ ಸಾಧ್ಯತೆಯಿದೆ" ಎಂದು ಕೋರ್ಟ್ ಗಮನಕ್ಕೆ ತಂದರು.

​ದಸರಾ ರಜಾದಿನಗಳಲ್ಲಿ ಈ ಕುರಿತು ವಿಶೇಷ ಪೀಠ ರಚಿಸುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ತಿಳಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಸಾಧ್ಯವಾಗದಿದ್ದಲ್ಲಿ ಇದೇ ಅಕ್ಟೋಬರ್ 26ರಂದು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries