HEALTH TIPS

ಆಲಂಕೂಡ್ಲು ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಿದ್ಧತೆ: ನ.8 ರಂದು ಸಂಘಟನಾ ಸಮಿತಿ ರಚನೆ ಸಭೆ

2027ರ ಫೆಬ್ರವರಿಯಲ್ಲಿ ಅದ್ಧೂರಿ ಬ್ರಹ್ಮಕಲಶೋತ್ಸವ ಆಚರಣೆಗೆ ನಿರ್ಧಾರ; ಕ್ಷೇತ್ರದ ಭಕ್ತರು, ಪದಾಧಿಕಾರಿಗಳು ಹಾಗೂ ಗ್ರಾಮಸ್ಥರ ಸಹಭಾಗಿತ್ವಕ್ಕೆ ಮನವಿ

ಬದಿಯಡ್ಕ: ಪುರಾತನ ಆಲಂಕೂಡ್ಲು ಶ್ರೀ ಮಹಾಲಿಂಗೇಶ್ವರ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ನಿರ್ಧರಿಸಲಾಗಿದೆ.


ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತೆಗಳು ಮತ್ತು ಕಾರ್ಯಕ್ರಮಗಳ ರೂಪುರೇಷೆಗಳನ್ನು ಚರ್ಚಿಸಲು ನಡೆದ ಸಮಾಲೋಚನಾ ಸಭೆಯಲ್ಲಿ ನವೆಂಬರ್ 8ರಂದು ಬೆಳಿಗ್ಗೆ 10 ಗಂಟೆಗೆ ಕ್ಷೇತ್ರದ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ ಸಂಘಟನಾ ಸಮಿತಿ ರಚನಾ ಸಭೆ ನಡೆಸಲು ತೀರ್ಮಾನಿಸಲಾಯಿತು.

ಭಕ್ತರ ಸಹಭಾಗಿತ್ವಕ್ಕೆ ಮನವಿ:

ಕ್ಷೇತ್ರದ ಬ್ರಹ್ಮಕಲಶೋತ್ಸವವನ್ನು ಭಗವದ್ಭಕ್ತರ ಸಹಭಾಗಿತ್ವದೊಂದಿಗೆ ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ವಿವಿಧ ಕಾರ್ಯಕ್ರಮಗಳು, ವ್ಯವಸ್ಥೆಗಳು ಹಾಗೂ ಸಿದ್ಧತೆಗಳ ಕುರಿತು ಸಂಘಟನಾ ಸಮಿತಿ ರಚನಾ ಸಭೆಯಲ್ಲಿ ಚರ್ಚಿಸಲಾಗುವುದು.

ಕ್ಷೇತ್ರದ ಪದಾಧಿಕಾರಿಗಳು, ಭಕ್ತರು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

ಗಣ್ಯರ ಉಪಸ್ಥಿತಿ:

ಕ್ಷೇತ್ರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸೀತಾರಾಮ ರೈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೊಲ್ಯ ಮಠದ ಅಧ್ಯಕ್ಷ ಮಧುಸೂದನ ಆಯರ್ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಪದಾಧಿಕಾರಿಗಳಾದ ಪುರುಷೋತ್ತಮ ಪುಣಿಂಚಿತ್ತಾಯ, ಸಂತೋಷ್ ಚಂದ್ರಪ್ಪಾರ, ರಾಮಚಂದ್ರ ವೊರ್ಕೋಡ್ಲು, ಸೇತುನಾಥ್, ರವಿ ಶಂಕರ ವಾಲ್ತಾಜೆ, ನಾರಾಯಣ ಅರ್ಲಡ್ಕ,, ಸೀತಾರಾಮ ರೈ, ಸುಜಾತಾ ಭಾಸ್ಕರ ಅರ್ಲಡ್ಕ, ಶಶಿಧರನ್ ನಾಯರ್, ದಿನೇಶ್ ಚಾಂಡಿಮೂಲೆ ಮೊದಲಾದವರು ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್ ಸ್ವಾಗತಿಸಿ, ರತ್ನಾಕರ ಆಳ್ವ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries