HEALTH TIPS

Andhra Pradesh | ಔಷಧಿ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟ: ಐವರು ಮೃತ್ಯು,10 ಜನರಿಗೆ ಗಾಯ

ತಿರುಪತಿ: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಶ್ರೀಸಿಟಿಯಲ್ಲಿರುವ ಖಾಸಗಿ ಔಷಧಿ ತಯಾರಿಕೆ ಕಂಪೆನಿ ಟಿಐಎಲ್ ಹೆಲ್ತ್‌ಕೇರ್‌ನಲ್ಲಿ ಬಾಯ್ಲರ್ ಸ್ಫೋಟಗೊಂಡು ಐವರು ಕಾರ್ಮಿಕರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.


ಸ್ಥಳಕ್ಕೆ ಧಾವಿಸಿದ ರಕ್ಷಣಾ ಪಡೆ ಮತ್ತು ತುರ್ತು ಸೇವಾ ತಂಡಗಳು ಪರಿಹಾರ ಕಾರ್ಯಾಚರಣೆ ನಡೆಸಿದವು. ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುಪತಿ ಸಂಸದ ಮದ್ದಿಲ ಗುರುಮೂರ್ತಿ ಅವರು ದುರಂತದ ಬಗ್ಗೆ ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ಈ ದುರಂತದ ಕಾರಣ ತಿಳಿಯಲು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಆಂಧ್ರಪ್ರದೇಶದ ಶಿಕ್ಷಣ ಮತ್ತು ಐಟಿ ಸಚಿವ ನಾರಾ ಲೋಕೇಶ್ ಕೂಡ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿರುವ ಅವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳಿಗೆ ಸೂಕ್ತ ಹಾಗೂ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 







 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries