ಬದಿಯಡ್ಕ: ಬದಿಯಡ್ಕದ ಚಿನ್ಮಯ ವಿದ್ಯಾಲಯದಲ್ಲಿ ಮಾತೃಪೂಜೆ ಹಾಗೂ ಶಾರದಾ ಪೂಜೆಯನ್ನು ಭಕ್ತಿಶ್ರದ್ಧೆ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಮಾತೃಭಕ್ತಿ, ಗುರುಭಕ್ತಿ ಹಾಗೂ ವಿದ್ಯೆಯ ಮಹತ್ವದ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ತಾಯಂದಿರನ್ನು ಭಕ್ತಿಪೂರ್ವಕವಾಗಿ ಪೂಜಿಸಿ, ಅವರ ಆಶೀರ್ವಾದ ಪಡೆದರು. ತಾಯಿಯ ತ್ಯಾಗ, ಪ್ರೀತಿ ಹಾಗೂ ಮಹತ್ವವನ್ನು ಅರಿತು ಗೌರವಿಸುವ ಮೌಲ್ಯವನ್ನು ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಬೆಳೆಸಲಾಯಿತು.
ಬಳಿಕ ವಿದ್ಯಾದೇವತೆಯಾದ ಸರಸ್ವತಿ ದೇವಿಯನ್ನು ಆರಾಧಿಸುವ ಶಾರದಾ ಪೂಜೆಯನ್ನು ನೆರವೇರಿಸಲಾಯಿತು. ಪೂಜೆ ಹಾಗೂ ಪ್ರಾರ್ಥನೆಗಳ ಮೂಲಕ ವಿದ್ಯಾರ್ಥಿಗಳು ವಿದ್ಯಾದೇವಿಯ ಕೃಪೆಗೆ ಪಾತ್ರರಾಗುವಂತೆ ಪ್ರಾರ್ಥಿಸಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಮಾನಸ, ಪೆÇೀಷಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

.jpg)
.jpg)
