HEALTH TIPS

ಅಭಿವೃದ್ಧಿ, ಸೇವಾ ಕಾರ್ಯಗಳಿಂದ ನರೇಂದ್ರ ಮೋದಿಗೆ ವಿಶ್ವ ಮನ್ನಣೆ-ಸಂಕಲ್ಪ ಯಾತ್ರೆ ಉದ್ಘಾಟಿಸಿ ಸಿ.ಕೆ ಪದ್ಮನಾಭನ್ ಅಭಿಪ್ರಾಯ

ಕಾಸರಗೋಡು: ಅಂತ್ಯೋದಯ ಎಂಬ ಆಶಯದ ಸಾಕಾರತೆಯ ಮೂಲಕ 140 ಕೋಟಿ ಜನರ ಕಲ್ಯಾಣ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಜಗತ್ತು ಮಹಾನ್ ನಾಯಕನಾಗಿ ಒಪ್ಪಿಕೊಂಡಿರುವುದಾಗಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಸಿ.ಕೆ. ಪದ್ಮನಾಭನ್ ಹೇಳಿದರು.


ನರೇಂದ್ರ ಮೋದಿ ಅವರು ಆಡಳಿತಗಾರರಾಗಿ 25 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಮಟ್ಟದಲ್ಲಿ ಆಯೋಜಿಸಿರುವ  ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಕಾಸರಗೋಡು ನಗರಸಭಾ ಟೌನ್‍ಹಾಳ್‍ನಲ್ಲಿ ಆಯೋಜಿಸಲಾದ 'ವಿಕಸಿತ ಭಾರತ ಸಂಕಲ್ಪ ಸಭೆ'ಉದ್ಘಾಟಿಸಿ ಅವರು ಮಾತನಾಡಿದರು. 

ವಂದೇ ಮಾತರಂ ಪೂರ್ಣ ಪ್ರಮಾಣದಲ್ಲಿ ಹಾಡಬೇಕೆಂಬ ನಿರ್ದೇಶನ ನೀಡುವ ಮೂಲಕ ರಾಷ್ಟ್ರೀಯ ಭಾವೈಕ್ಯ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶವನ್ನು ನರೇಂದ್ರ ಮೋದಿ ಸರ್ಕಾರ ದೇಶಕ್ಕೆ ಸಾರಿದೆ.  ವಂದೇ ಮಾತರಂ ಹಾಡುತ್ತಾ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಮ್ಮ ಹಿರಿಯರಿಗೆ ಕೃತಜ್ಞತೆ ಮತ್ತು ಗೌರವ ಸಲ್ಲಿಸಬೇಕಾದ ಅಗತ್ಯವಿದೆ ಎಂದು ಸಿ.ಕೆ. ಪದ್ಮನಾಭನ್ ತಿಳಿಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯರಾದ ವಿ. ರವೀಂದ್ರನ್, ಸತೀಶ್ಚಂದ್ರ ಭಂಡಾರಿ, ಸವಿತಾ, ಎ. ವೇಲಾಯುಧನ್, ಕಣ್ಣೂರು ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್. ಸುನಿಲ್, ಮನುಲಾಲ್ ಮೇಲತ್, ಜಿಲ್ಲಾ ಉಪಾಧ್ಯಕ್ಷ ಹಾಗೂ ಸೇವಾ ಜ್ಯೋತಿ ಯಾತ್ರೆಯ ಜಿಲ್ಲಾ ಪ್ರಭಾರಿ ಪಿ. ರಮೇಶ್ ಉಪಸ್ಥಿತರಿದ್ದರು.

ಈ ಸಂದರ್ಭ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ನೇರ ಪ್ರಸಾರವನ್ನು ಬಿತ್ತರಿಸಲಾಯಿತು. 

ಸಿ.ಕೆ ಪದ್ಮನಾಭನ್ ಸೇವಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿರು.  ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಅವರ ನೇತೃತ್ವದಲ್ಲಿ ಆರಂಭಗೊಂಡ ಸೇವಾ ಜ್ಯೋತಿ ಯಾತ್ರೆಯು ಚಂದ್ರಗಿರಿ ಜಂಕ್ಷನ್, ಹೊಸ ಬಸ್ ನಿಲ್ದಾಣ ಮಾರ್ಗವಾಗಿ ತಾಳಿಪಡುಪು ಮೈದಾನದಲ್ಲಿ ಮುಕ್ತಾಯಗೊಂಡಿತು.

ಜಿಲ್ಲೆಯ 10 ಮಂಡಲಗಳಿಂದ ಸುಮಾರು 500ಕ್ಕೂ ಹೆಚ್ಚು ಬೂತ್‍ಮಟ್ಟದ ಕಾರ್ಯಕರ್ತರು ದ್ವಿಚಕ್ರ ವಾಹನಗಳೊಂದಿಗೆ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries