HEALTH TIPS

ಬಂಧಿತ ನಾಯಕರನ್ನು ಬಿಡುಗಡೆ ಮಾಡದಿದ್ದರೆ ಪಾದಯಾತ್ರೆ, ಉಪವಾಸ ಸತ್ಯಾಗ್ರಹ: ವಾಂಗ್‌ಚುಕ್ ಎಚ್ಚರಿಕೆ

ನವದೆಹಲಿ: ದಿಲ್ಲಿಯಲ್ಲಿ ಶನಿವಾರ ವಶಕ್ಕೆ ಪಡೆದಿರುವ ರಾಜಕೀಯ ನಾಯಕರು ಮತ್ತು ಪ್ರತಿಭಟನಾಕಾರರನ್ನು ರವಿವಾರದೊಳಗೆ ಬಿಡುಗಡೆ ಮಾಡದಿದ್ದರೆ ಪಾದಯಾತ್ರೆ ಅಥವಾ ಉಪವಾಸ ಸತ್ಯಾಗ್ರಹ ನಡೆಸುವ ಬಗ್ಗೆ ಪರಿಗಣಿಸುವುದಾಗಿ ಲಡಾಖ್‌ ನ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಎಚ್ಚರಿಕೆ ನೀಡಿದ್ದಾರೆ.


ಚುನಾವಣಾ ಆಯೋಗದ ಕಾರ್ಯನಿರ್ವಹಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಜಂತರ್ ಮಂತರ್‌ ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿತ್ತು. ಈ ಸಂದರ್ಭದಲ್ಲಿ ಪಕ್ಷದ ಸ್ಥಾಪಕ ಅಭಿಜಿತ್ ದೀಪ್ಕೆ, ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ರಾಜಕೀಯ ನಾಯಕರು, ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪ್ರಕಟಿಸಿದ ವಿಡಿಯೊ ಸಂದೇಶದಲ್ಲಿ ವಾಂಗ್‌ಚುಕ್, ಭಾರತವು 'ಘೋಷಿತವಲ್ಲದ ತುರ್ತು ಪರಿಸ್ಥಿತಿ'ಯಲ್ಲಿದೆ ಎಂದು ಹೇಳಿದ್ದಾರೆ.

'ಪ್ರತಿಭಟನೆಯಲ್ಲಿ ಒಗ್ಗಟ್ಟು ಮತ್ತು ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿ ನಿನ್ನೆ ಸಂದೇಶ ಪ್ರಕಟಿಸಿದ್ದೆ. ಆದರೆ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ಘೋಷಿತವಲ್ಲದ ತುರ್ತು ಪರಿಸ್ಥಿತಿಯಲ್ಲಿದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ' ಎಂದು ಅವರು ತಿಳಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧದ ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ, ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಖುದ್ದಾಗಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

'ಚಳವಳಿಯನ್ನು ಮುನ್ನಡೆಸಲು ಹಲವು ನಾಯಕರು ಇದ್ದಾರೆ ಎಂಬುದು ನನಗೆ ಸಂತೋಷ ತಂದಿತ್ತು. ಆದರೆ, ಅವರೆಲ್ಲರನ್ನೂ ಬಂಧಿಸಲಾಗಿದೆ ಎಂಬುದು ಈಗ ತಿಳಿದುಬಂದಿದೆ' ಎಂದು ಅವರು ಹೇಳಿದ್ದಾರೆ.

ಬಂಧಿತ ನಾಯಕರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಬಹುದು ಎಂಬ ಆಶಯವನ್ನು ವಾಂಗ್‌ಚುಕ್ ವ್ಯಕ್ತಪಡಿಸಿದ್ದಾರೆ. 'ಬಂಧಿತ ನಾಯಕರನ್ನು ರವಿವಾರದೊಳಗೆ ಬಿಡುಗಡೆ ಮಾಡದಿದ್ದರೆ, ಉಪವಾಸ ಸತ್ಯಾಗ್ರಹ ಅಥವಾ ಪಾದಯಾತ್ರೆ ನಡೆಸುವ ಬಗ್ಗೆ ಪರಿಗಣಿಸಲು ಅನಿವಾರ್ಯವಾಗುತ್ತದೆ' ಎಂದು ಅವರು ಎಚ್ಚರಿಸಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries