HEALTH TIPS

ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಘೇಲಾ ಮರಳಿ ಕಾಂಗ್ರೆಸ್‌ಗೆ?

ಅಹಮದಾಬಾದ್: ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಘೇಲಾ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

86 ವರ್ಷದ ವಘೇಲಾ ಅವರು ಕಾಂಗ್ರೆಸ್‌ಗೆ ಮರಳಲು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಘೇಲಾ ಮರು ಸೇರ್ಪಡೆಗೆ ಗುಜರಾತ್ ಕಾಂಗ್ರೆಸ್ ಈಗಾಗಲೇ ಹಸಿರು ನಿಶಾನೆ ತೋರಿಸಿದ್ದು ಹೈಕಮಾಂಡ್ ಸಮ್ಮತಿ ಮಾತ್ರ ಬಾಕಿಯಿದೆ.

ಮುಂಬರಲಿರುವ ಅಹಮದಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅವರನ್ನು ತಾರಾ ಪ್ರಚಾರಕರನ್ನಾಗಿ ಬಳಸಿಕೊಳ್ಳಲು ಸ್ಥಳೀಯ ನಾಯಕರು ಯೋಜಿಸಿದ್ದು, ಅವರನ್ನು ಶೀಘ್ರವೇ ಪಕ್ಷಕ್ಕೆ ಸೇರಿಸಿಕೊಳ್ಳಲು ರಾಜ್ಯ ಘಟಕ ಉತ್ಸುಕವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಹಿರಿಯ ಕಾಂಗ್ರೆಸ್ ನಾಯಕ ಶಕ್ತಿಸಿಂಗ್ ಗೋಹಿಲ್, 'ಕಾದು ನೋಡಿ, ಸರಿಯಾದ ಸಮಯದಲ್ಲಿ ಎಲ್ಲರಿಗೂ ಉತ್ತರ ಸಿಗಲಿದೆ' ಎಂದು ಹೇಳಿದ್ದಾರೆ.

ದೀರ್ಘ ರಾಜಕೀಯ ಪಯಣ: ಗುಜರಾತ್ ರಾಜಕೀಯದಲ್ಲಿ ವಘೇಲಾ ಸುದೀರ್ಘ ಅನುಭವ ಹೊಂದಿದ್ದಾರೆ. ಜನಸಂಘದ ಮೂಲಕ ರಾಜಕೀಯ ಜೀವನ ಆರಂಭಿಸಿದ ಅವರು ಕೇಶುಭಾಯಿ ಪಟೇಲ್ ಮತ್ತು ನರೇಂದ್ರ ಮೋದಿ ಅವರೊಂದಿಗೆ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ 1996ರಲ್ಲಿ ಬಿಜೆಪಿ ತೊರೆದು 'ರಾಷ್ಟ್ರೀಯ ಜನತಾ ಪಕ್ಷ' ಸ್ಥಾಪಿಸಿದರು.

1996 ರಿಂದ 1997ರವರೆಗೆ ಕಾಂಗ್ರೆಸ್ ಬೆಂಬಲದೊಂದಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅವರು, 1998ರಲ್ಲಿ ತಮ್ಮ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿದರು. ತದನಂತರ ಎರಡು ದಶಕಗಳ ಕಾಲ ಕಾಂಗ್ರೆಸ್‌ನಲ್ಲಿದ್ದು, ಯುಪಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಹಾಗೂ ಗುಜರಾತ್ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದರು. 2017ರಲ್ಲಿ ಕಾಂಗ್ರೆಸ್‌ನಿಂದ ಹೊರಬಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries