HEALTH TIPS

ಮೈಸೂರಿನ ದಸರಾ ಪ್ರಧಾನ ಕವಿಗೋಷ್ಠಿಗೆ ಕಾಸರಗೋಡಿನ ಡಾ. ರತ್ನಾಕರ ಮಲ್ಲಮೂಲೆ ಆಯ್ಕೆ

ಕಾಸರಗೋಡು: ಮೈಸೂರಿನ ದಸರಾ ಪ್ರಧಾನ ಕವಿಗೋಷ್ಠಿಗೆ ಕಾಸರಗೋಡಿನಿಂದ ಡಾ. ರತ್ನಾಕರ ಮಲ್ಲಮೂಲೆ ಆಯ್ಕೆಯಾಗಿದ್ದಾರೆ.

ಅಕ್ಟೋಬರ್ 17ರಂದು ಬೆಳಗ್ಗೆ 10 ಗಂಟೆಗೆ ಮಾನಸಗಂಗೋತ್ರಿಯ ಕುವೆಂಪು ಅಧ್ಯಯನ ಸಂಸ್ಥೆಯ ಬಿ.ಎಂ. ಶ್ರೀ ಸಭಾಂಗಣದಲ್ಲಿ ಪ್ರಧಾನ ಕವಿಗೋಷ್ಠಿ ನಡೆಯಲಿದೆ.

ಹಿರಿಯ ಕವಯತ್ರಿ ಡಾ. ಪ್ರತಿಭಾ ನಂದಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹಿರಿಯ ಕವಿ ಡಾ. ಅಲ್ಲಮಪ್ರಭು ಬೆಟ್ಟದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಕವಿ, ಸಂಸ್ಕೃತಿ ಚಿಂತಕ ಸುಬ್ಬು ಹೊಲೆಯಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಾಡಿನ ವಿವಿಧ ಭಾಗಗಳ ಕವಿಗಳು ಗೋಷ್ಠಿಯಲ್ಲಿ ತಮ್ಮ ಸ್ವರಚಿತ ಕವನಗಳನ್ನು ವಾಚಿಸಲಿದ್ದಾರೆ.

ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ರತ್ನಾಕರ ಮಲ್ಲಮೂಲೆ ಅವರು ಕಣ್ಣೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರೂ ಆಗಿದ್ದಾರೆ. ಶೈಕ್ಷಣಿಕ ಕ್ಷೇತ್ರದ ಜತೆಗೆ ಸಾಹಿತ್ಯ, ಸಮಾಜ, ಸಂಘಟನೆ, ಸಂಸ್ಕೃತಿ ಮತ್ತು ಪರಿಸರ ಕ್ಷೇತ್ರಗಳಲ್ಲಿಯೂ ಅವರು ಗುರುತಿಸಿಕೊಂಡಿದ್ದಾರೆ.

ಅವರ ಕವನಗಳು, ಸಾಹಿತ್ಯಿಕ ಹಾಗೂ ಸಂಶೋಧನಾತ್ಮಕ ಬರಹಗಳು ನಾಡಿನ ವಿವಿಧ ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ಪ್ರಕಟವಾಗಿವೆ. ಮಂಗಳೂರು ಆಕಾಶವಾಣಿಯೂ ಅವರ ಕವನಗಳನ್ನು ಪ್ರಸಾರ ಮಾಡಿದೆ. ರಾಜ್ಯಮಟ್ಟದ ಕವನ ಸ್ಪರ್ಧೆಗಳಲ್ಲಿ ಅವರು ಬಹುಮಾನಗಳನ್ನು ಪಡೆದಿದ್ದಾರೆ. ಅವರ ಮೂರು ಕೃತಿಗಳು ಪ್ರಕಟಗೊಂಡಿವೆ.

ರಾಷ್ಟ್ರೀಯ ಸೇವಾ ಯೋಜನೆಯಡಿ ರಾಷ್ಟ್ರಪತಿಗಳಿಂದ ನೀಡಲಾಗುವ ಅತ್ಯುತ್ತಮ ಯೋಜನಾಧಿಕಾರಿ ರಾಷ್ಟ್ರಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಕೇರಳ ಸರ್ಕಾರವು ಅವರಿಗೆ ಗುಡ್ ಸರ್ವಿಸ್ ಎಂಟ್ರಿ ಪುರಸ್ಕಾರ ನೀಡಿ ಗೌರವಿಸಿದೆ.

ತಮ್ಮ ಮನೆ ಮತ್ತು ಪರಿಸರವನ್ನು ‘ವನವಾಸಿ’ ಎಂಬ ಹೆಸರಿನಲ್ಲಿ ಪರಿಸರ ಅಧ್ಯಯನ ಕೇಂದ್ರವಾಗಿ ರೂಪಿಸಿರುವ ಅವರು, ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಅಧ್ಯಯನಾಸಕ್ತರು ಹಾಗೂ ಪರಿಸರ ಪ್ರೇಮಿಗಳಿಗೆ ಭೇಟಿ ಮತ್ತು ಅಧ್ಯಯನಕ್ಕೆ ಅವಕಾಶ ಕಲ್ಪಿಸಿದ್ದಾರೆ. ಕೇರಳ ಅರಣ್ಯ ಇಲಾಖೆಯ ‘ವನಮಿತ್ರ’ ಪ್ರಶಸ್ತಿಯೂ ಅವರಿಗೆ ಲಭಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries