HEALTH TIPS

ಅಭಿಜಿತ್ ದೀಪ್ಕೆ, ನೇಹಾ ಬೋರಾ ಎಲ್ಲಿದ್ದಾರೆ? ತಮಿಳುನಾಡು ಮಾಜಿ ಸಿಎಂ ಸ್ಟಾಲಿನ್

ಚೆನ್ನೈ: ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಪೊಲೀಸರು ಎಲ್ಲಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಪ್ರಶ್ನಿಸಿದ್ದಾರೆ. 


ಮತದಾರರ ಪಟ್ಟಿಯ ವಿಶೇಷ ಸಮಗ್ರ (ಎಸ್‌ಐಆರ್‌) ವೇಳೆ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ, ಎಐಎಸ್‌ಎ ಸೇರಿದಂತೆ ಹಲವು ಸಂಘಟನೆಗಳು ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಇಂದು (ಅಕ್ಟೋಬರ್ 16ರಂದು) ತಿರಂಗಾ ಯಾತ್ರೆಗೆ ಕರೆ ನೀಡಿದ್ದವು.

ಆದರೆ, ಪ್ರತಿಭಟನೆ ಆರಂಭಕ್ಕೂ ಮುನ್ನವೇ ದೀಪ್ಕೆ ಹಾಗೂ ಬೋರಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ನೇಹಾ ಬೋರಾ ಅವರ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

'ನೇಹಾ ಒಬ್ಬರನ್ನೇ ವಶಕ್ಕೆ ಪಡೆದು, ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಅವರ ಬಳಿ ಅವರ ಫೋನ್ ಕೂಡ ಇಲ್ಲ. ನೇಹಾ ಎಲ್ಲಿದ್ದಾಳೆ? ದೆಹಲಿ ಪೊಲೀಸರು ಉತ್ತರಿಸಲೇಬೇಕು' ಎಂದು ಆಗ್ರಹಿಸಲಾಗಿದೆ.

ಈ ಟ್ವೀಟ್‌ ಅನ್ನು ಹಂಚಿಕೊಂಡಿರುವ ಸ್ಟಾಲಿನ್‌, 'ಅಭಿಜಿತ್‌ ದೀಪ್ಕೆ, ನೇಹಾ ಬೋರಾ ಎಲ್ಲಿದ್ದಾರೆ? ಎಲ್ಲಿದ್ದಾರೆ ಎಂಬುದನ್ನು ಬಹಿರಂಗಪಡಿಸದೆ ಅವರನ್ನು ವಶದಲ್ಲಿ ಇರಿಸಿಕೊಳ್ಳುವುದು ಕಾನೂನುಬಾಹಿರ ಮತ್ತು ಅತ್ಯಂತ ಅಮಾನವೀಯ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಕೇಂದ್ರ ಸರ್ಕಾರವು ಕೂಡಲೇ ಅವರನ್ನು ಬಿಡುಗಡೆ ಮಾಡಿಸಬೇಕು. ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸವನ್ನು ನಿಲ್ಲಿಸಬೇಕು. ಈ ಚಳವಳಿಯನ್ನು ದಮನ ಮಾಡಲು ನಡೆಸುವ ಪ್ರತಿಯೊಂದು ಪ್ರಯತ್ನವೂ, ಅದನ್ನು ಇನ್ನಷ್ಟು ಬಲಪಡಿಸುತ್ತದೆ' ಎಂದು ಎಚ್ಚರಿಸಿದ್ದಾರೆ.

ಹಾಗೆಯೇ, '#GyaneshKumarMustGo' ಟ್ಯಾಗ್ ಬಳಸಿ ಜ್ಞಾನೇಶ್‌ ಕುಮಾರ್‌ ತಲೆದಂಡಕ್ಕೆ ಒತ್ತಾಯಿಸಿರುವ ಅವರು, ಕೇಂದ್ರ ಸರ್ಕಾರದ ಎದುರು ಬೇರೆ ಆಯ್ಕೆ ಇಲ್ಲ ಎಂದಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries