ಈ ಬಗ್ಗೆ 'ಲೈವ್ ಲಾ' ವರದಿ ಮಾಡಿದೆ.
ಸಾಕೇತ್ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಭಿನವ್ ಪಾಂಡೆ ಅವರ ಮುಂದೆ ಅರ್ಜಿ ಸಲ್ಲಿಸಿದ್ದಾರೆ.
ಇಬ್ಬರು ವಕೀಲ ಸಹೋದ್ಯೋಗಿಗಳೊಂದಿಗೆ ವಕೀಲರ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್‌ನತ್ತ ತೆರಳುತ್ತಿದ್ದಾಗ, ಮನೆಯ ಸಮೀಪದಿಂದ ಮುಂದೆ ಹೋಗಲು ಪೊಲೀಸರು ಅವಕಾಶ ನೀಡಲಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಎರಡು ಕಾರುಗಳು ತಮ್ಮ ವಾಹನದ ದಾರಿಗೆ ಅಡ್ಡಲಾಗಿ ನಿಂತಿದ್ದವು ಮತ್ತು ಪೊಲೀಸರು ಕಾರಿನ ಬಾಗಿಲುಗಳ ಹೊರಗೆ ನಿಂತಿದ್ದರು ಎಂದು ಅವರು ಆರೋಪಿಸಿದ್ದಾರೆ. ಈ ಘಟನೆಯ ವಿಡಿಯೊವನ್ನು ನ್ಯಾಯಾಲಯ ಪರಿಶೀಲಿಸಬಹುದು ಎಂದೂ ಸಿಂಗ್ ತಿಳಿಸಿದ್ದಾರೆ.
ತಮ್ಮನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು, ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದರಿಂದ ತಮ್ಮ ಜೀವ ಮತ್ತು ಸ್ವಾತಂತ್ರ್ಯಕ್ಕೆ ಅಪಾಯ ಎದುರಾಗಿದೆ ಎಂದು ಅವರು ಅರ್ಜಿಯಲ್ಲಿ ಹೇಳಿದ್ದಾರೆ.

