HEALTH TIPS

ಹಿರಿಯ ಯಕ್ಷಗಾನ ಕಲಾವಿದ ಗೋಪಾಲಕೃಷ್ಣ ನಾಯಕ್ ಅವರಿಗೆ ‘ಯಕ್ಷೋತ್ಸವ ಪ್ರಶಸ್ತಿ’ ಪ್ರದಾನ


ಕಾಸರಗೋಡಿನಲ್ಲಿ ಶ್ರೀ ವೆಂಕಟರಮಣ ಕೃಪಾಶ್ರಿತ ಯಕ್ಷಗಾನ ಅಧ್ಯಯನ ಕೇಂದ್ರದ 9ನೇ ವಾರ್ಷಿಕೋತ್ಸವ

ಕಾಸರಗೋಡು: ನಗರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೆಂಕಟರಮಣ ಕೃಪಾಶ್ರಿತ ಯಕ್ಷಗಾನ ಅಧ್ಯಯನ ಕೇಂದ್ರದ 9ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾದ ‘ಕಾಸರಗೋಡು ಯಕ್ಷೋತ್ಸವ-2026’ ಪ್ರಶಸ್ತಿ ಪ್ರದಾನ ಸಮಾರಂಭ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸುರಂಬೈಲ್ ಗೋಪಾಲಕೃಷ್ಣ ನಾಯಕ್ ಅವರಿಗೆ ಕ್ಷೇತ್ರದ ತಾಂತ್ರಿಕ ಪರಿಣತರು, ಯಕ್ಷಗಾನ ಕಲಾವಿದರು ಹಾಗೂ ಕಲಾಪೋಷಕರ ಸಮ್ಮುಖದಲ್ಲಿ ಬ್ರಹ್ಮಶ್ರೀ ಉಳ್ಳಿಯತ್ತಾಯ ವಿಷ್ಣು ಆಸ್ರ ಅವರ ಹೆಸರಿನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ವೆಂಕಟರಮಣಸ್ವಾಮಿ ಕೃಪಾಶ್ರಿತ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಡಾ. ಕೆ.ಎನ್. ವೆಂಕಟರಮಣ ಹೊಳ್ಳ, ಅಧ್ಯಯನ ಕೇಂದ್ರದ ಅಧ್ಯಕ್ಷ ಕೆ.ಎನ್. ರಾಮಕೃಷ್ಣ ಹೊಳ್ಳ, ಕುತ್ಯಾಳ ಯಕ್ಷಗಾನ ರಜತ ಸಂಭ್ರಮ ಸಮಿತಿಯ ಅಧ್ಯಕ್ಷ ಡಾ. ಹರಿಕಿರಣ ಬಂಗೇರ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಗೋಪಾಲಕೃಷ್ಣ ಉಪಸ್ಥಿತರಿದ್ದರು.

ಶ್ರೀ ವೆಂಕಟರಮಣ ಬಾಲಗೋಕುಲದ ಮಕ್ಕಳಿಂದ ಪ್ರಾರ್ಥನೆ ನಡೆಯಿತು. ಕಿಶೋರ್ ಕುಮಾರ್ ಎಸ್.ವಿ.ಟಿ. ಸ್ವಾಗತಿಸಿದರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ರೂಪಕಲಾ ಹೊಳ್ಳ ವಂದಿಸಿದರು.





 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries