HEALTH TIPS

ಪಂಜಾಬ್ : ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ, ಜೈಲಿನಲ್ಲಿರುವ ಸಚಿವನಿಗೂ ಟಿಕೆಟ್

ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಸಿದ್ಧತೆ ಆರಂಭಿಸಿದೆ. ಇದರ ಭಾಗವಾಗಿ 40 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ ಪಂಜಾಬ್ ಎಎಪಿ ಅಧ್ಯಕ್ಷ ಅಮನ್ ಅರೋರಾ, ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಸೇರಿ ಅನೇಕ ಪ್ರಮುಖ ನಾಯಕರಿಗೆ ಮತ್ತು ಸಚಿವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಿಲ್ಲ.

20ಕ್ಕೂ ಹೆಚ್ಚು ಕ್ಷೇತ್ರಗಳ ಉಸ್ತುವಾರಿಗಳಿಗೆ ಇಲ್ಲ ಟಿಕೆಟ್

ಪಕ್ಷವು 20ಕ್ಕೂ ಅಧಿಕ ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿತ್ತು. ಈ ಪೈಕಿ ಯಾರಿಗೂ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಿಲ್ಲ. ಶನಿವಾರ ದೆಹಲಿಯಲ್ಲಿ ನಡೆದ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ಬಳಿಕ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್ ಕುಮಾರ್ ಗುಪ್ತಾ 40 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಈ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಧುರಿ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸಲಿದ್ದಾರೆ. ಆ ಮೂಲಕ ಅವರು ಬೇರೆ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಪಕ್ಷದ ಕಾರ್ಯಾಧ್ಯಕ್ಷ ಅಮನ್‌ಶೇರ್ ಸಿಂಗ್ ಅವರು ಬಟಾಲಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಸಾರ್ವಜನಿಕ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳ ಆಯ್ಕೆ

ಅಭ್ಯರ್ಥಿಗಳ ಆಯ್ಕೆ ಕುರಿತು ಮಾತನಾಡಿದ ಭಗವಂತ್ ಮಾನ್, 'ಸಾರ್ವಜನಿಕ ಸಮೀಕ್ಷೆ ಮತ್ತು ಜನರ ಪ್ರತಿಕ್ರಿಯೆ ಆಧರಿಸಿ 40 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ' ಎಂದು ತಿಳಿಸಿದ್ದಾರೆ.

ಜೈಲಿನಲ್ಲಿರುವ ಸಚಿವರಿಗೂ ಮತ್ತೆ ಟಿಕೆಟ್

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆ ಎದುರಿಸಿ ಜೈಲಿನಲ್ಲಿರುವ ಸಚಿವ ಸಂಜೀವ್ ಅರೋರಾ ಅವರಿಗೆ ಲುಧಿಯಾನ ಪಶ್ಚಿಮ ಕ್ಷೇತ್ರದಿಂದ ಮತ್ತೆ ಟಿಕೆಟ್ ನೀಡಲಾಗಿದೆ.

ವಿಧಾನಸಭಾ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ ಅವರಿಗೆ ಕೊಟ್ಕಾಪುರ ಕ್ಷೇತ್ರದಿಂದ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ಸಚಿವ ಸಂಪುಟ ಕೈಬಿಟ್ಟಿರುವ ಮಾಜಿ ಸಚಿವ ಬಲ್ಕಾರ್ ಸಿಂಗ್ ಅವರಿಗೆ ಕರ್ತಾರ್‌ಪುರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಮಾಜಿ ಸಚಿವ ಕುಲದೀಪ್ ಸಿಂಗ್ ಧಾಲಿವಾಲ್, ಬ್ರಹ್ಮ್ ಶಂಕರ್ ಶರ್ಮಾ (ಜಿಂಪಾ) ಮತ್ತು ಡಾ. ಇಂದರ್‌ಬೀರ್ ಸಿಂಗ್ ನಿಜ್ಜರ್ ಅವರಿಗೂ ಮೊದಲ ಪಟ್ಟಿಯಲ್ಲಿ ಅವಕಾಶ ನೀಡಲಾಗಿದೆ.

ಪಕ್ಷವು ಗೆಲ್ಲುವ ಸಾಧ್ಯತೆ ಹೆಚ್ಚಿರುವ ಸುರಕ್ಷಿತ ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಎಎಪಿ ನಾಯಕರೊಬ್ಬರು ತಿಳಿಸಿರುವುದಾಗಿ ನ್ಯೂಸ್ 18 ವರದಿ ಮಾಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries