HEALTH TIPS

ದಾಖಲೆಗಳು ಇಲ್ಲ ಎಂಬ ಕಾರಣಕ್ಕೆ ಜಾನುವಾರುಗಳನ್ನು ವಧೆಗಾಗಿ ಸಾಗಾಟ ಮಾಡಲಾಗುತ್ತಿದೆ ಎಂದು ಊಹಿಸಬಾರದು: ಸುಪ್ರೀಂ ಕೋರ್ಟ್

ನವದೆಹಲಿ: ಜಾನುವಾರುಗಳ ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳು ಇಲ್ಲ ಎಂಬ ಕಾರಣಕ್ಕೆ ಅವುಗಳನ್ನು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಬಾರದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 


ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರಿದ್ದ ಪೀಠವು, ವಧೆಗಾಗಿ 32 ಎತ್ತುಗಳ ಸಾಗಾಟದ ಆರೋಪದ ಮೇಲೆ ಛತ್ತೀಸ್‌ಗಢ ಕೃಷಿ ಜಾನುವಾರು ಸಂರಕ್ಷಣಾ ಕಾಯ್ದೆ- 2004ರ ಅಡಿಯಲ್ಲಿ ವ್ಯಕ್ತಿಯೊಬ್ಬರಿಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿದೆ.

ದಾಖಲೆಗಳಿಲ್ಲದೆ ಜಾನುವಾರುಗಳನ್ನು ಸಾಗಿಸಿದ ಮಾತ್ರಕ್ಕೆ, ಅವುಗಳನ್ನು ಕೇವಲ ವಧೆಯ ಉದ್ದೇಶಕ್ಕಾಗಿ ಸಾಗಿಸಲಾಗುತ್ತಿದೆ ಎಂದು ಭಾವಿಸುವಂತಿಲ್ಲ ಎಂದು ನ್ಯಾಯಾಲಯವು ಈ ವೇಳೆ ಹೇಳಿದೆ.

ಅರ್ಜಿದಾರರು ಶಿಕ್ಷೆಗೆ ಗುರಿಯಾದ ಆರು ಆರೋಪಿಗಳಲ್ಲಿ ಒಬ್ಬರಾಗಿದ್ದರು. ಕಾಯ್ದೆಯ ಸೆಕ್ಷನ್ 6ನ್ನು ಉಲ್ಲಂಘಿಸಿ ಜಾನುವಾರುಗಳನ್ನು ಸಾಗಿಸಿದ್ದಾರೆ ಎಂಬುದು ಅವರ ವಿರುದ್ಧದ ಆರೋಪವಾಗಿತ್ತು. ಈ ಹಿನ್ನೆಲೆಯಲ್ಲಿ ಕಾಯ್ದೆಯ ಸೆಕ್ಷನ್ 10ರ ಅಡಿಯಲ್ಲಿ ಅವರಿಗೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1,000 ರೂ. ದಂಡ ವಿಧಿಸಲಾಗಿತ್ತು.

ಪ್ರಾಸಿಕ್ಯೂಷನ್ ಪ್ರಕಾರ, ಕೆಡುವಾದಿಂದ ಒಡಿಶಾ ಕಡೆಗೆ 32 ಹೋರಿಗಳನ್ನು ಟ್ರಕ್‌ನಲ್ಲಿ ಸಾಗಿಸಲಾಗುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಪೊಲೀಸರು ಟ್ರಕ್‌ ಅನ್ನು ತಡೆದಿದ್ದರು. ಬಳಿಕ ಜಾನುವಾರುಗಳನ್ನು ವಶಕ್ಕೆ ಪಡೆದು, ಚಾಲಕ ಮತ್ತು ಕ್ಲೀನರ್‌ನ್ನು ಬಂಧಿಸಿದ್ದರು. ಟ್ರಕ್‌ಗೆ ಬೆಂಗಾವಲಾಗಿ ಸಾಗಿದ ಆರೋಪದಲ್ಲಿ ಟ್ರಕ್‌ಗಿಂತ ಮೊದಲು ತೆರಳುತ್ತಿದ್ದ ಬೊಲೆರೊ ಕಾರನ್ನು ತಡೆದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಅವರಲ್ಲಿ ಅರ್ಜಿದಾರರು ಕೂಡ ಓರ್ವರಾಗಿದ್ದರು. ವಿಚಾರಣಾ ನ್ಯಾಯಾಲಯವು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries