ಕಾಸರಗೋಡು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಆಡಳಿತ ಮುಖ್ಯಸ್ಥರಾಗಿ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಮಟ್ಟದಲ್ಲಿ ಹಮ್ಮಿಕೊಂಡಿರುವ **‘ಸೇವಾ ಸಂಕಲ್ಪ ಅಭಿಯಾನ’**ದ ಅಂಗವಾಗಿ ಬಿಜೆಪಿ ನಾಯಕರಿಂದ ಅಂಗನವಾಡಿ ಭೇಟಿ ಕಾರ್ಯಕ್ರಮ ನಡೆಯಿತು.
ಬಿಜೆಪಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಶೋಭಾ ಸುರೇಂದ್ರನ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅವರ ನೇತೃತ್ವದಲ್ಲಿ ಮಧೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೀನ್ ದಯಾಳ್ ಉಪಾಧ್ಯಾಯ ಬಡ್ಸ್ ಶಾಲೆ ಸೇರಿದಂತೆ ವಿವಿಧ ಅಂಗನವಾಡಿಗಳಿಗೆ ಭೇಟಿ ನೀಡಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಪ್ರಮೀಳಾ ಮಜಲ್, ಪುಷ್ಪಾ ಗೋಪಾಲನ್, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರ ಕುದ್ರೆಪಾಡಿ, ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜ್ಞಾನಿ ಶಾನ್ಭಾಗ್, ಉಪಾಧ್ಯಕ್ಷ ಭಾನು ಪ್ರಕಾಶ್, ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ಕಾಸರಗೋಡು ಮಂಡಲ ಮತ್ತು ಏರಿಯಾ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.


