ಉಪ್ಪಳ: ಸ್ಕೂಟರ್‌ನಲ್ಲಿ ತ್ಯಾಜ್ಯವನ್ನು ತಂದು ಸಾರ್ವಜನಿಕ ಸ್ಥಳದಲ್ಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಳ ಹಿದಾಯತ್ ಬಜಾರ್ ಗೋಲ್ಡನ್ ರಸ್ತೆಯ ಶಹಬಾಜ್ ಕೋಟೇಜ್ ನಿವಾಸಿ ಸಾದಿಕ್ ಹುಸೈನ್ (67) ಎಂಬವರ ವಿರುದ್ಧ ಮಂಜೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಕಸ ಮತ್ತು ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 35(3)ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಯು ಸ್ಕೂಟರ್‌ನಲ್ಲಿ ತ್ಯಾಜ್ಯವನ್ನು ತಂದು ಉಪ್ಪಳ ರಾಷ್ಟ್ರೀಯ ಹೆದ್ದಾರಿಯ ಓವರ್‌ಬ್ರಿಡ್ಜ್ ಸಮೀಪದ ಸರ್ವಿಸ್ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತ್ಯಾಜ್ಯ ಸಾಗಿಸಲು ಬಳಸಿದ ಸ್ಕೂಟರ್ ಹಾಗೂ ತ್ಯಾಜ್ಯ ತುಂಬಿದ್ದ ಪ್ಲಾಸ್ಟಿಕ್ ಚೀಲಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


