HEALTH TIPS

ಕಾಸರಗೋಡಿನ ವೋಲ್ಟೇಜ್ ಸಮಸ್ಯೆಗೆ ಶಾಶ್ವತ ಪರಿಹಾರದ ನಿರೀಕ್ಷೆ

ಮೈಲಾಟಿ-ವಿದ್ಯಾನಗರ ವಿದ್ಯುತ್ ಫೀಡರ್ ನವೀಕರಣ ಆರಂಭ; ಅ. 31 ರವರೆಗೆ ವಿದ್ಯುತ್ ವ್ಯತ್ಯಯ ಸಾಧ್ಯತೆ

ಕಾಸರಗೋಡು: ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ತಲೆದೋರಿರುವ ಕಡಿಮೆ ವೋಲ್ಟೇಜ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ 110 ಕೆ.ವಿ. ಮೈಲಾಟಿ-ವಿದ್ಯಾನಗರ ವಿದ್ಯುತ್ ಫೀಡರ್‍ನ ಸಾಮಥ್ರ್ಯ ಹೆಚ್ಚಿಸುವ ನವೀಕರಣ ಕಾಮಗಾರಿ ಆರಂಭಿಸಲಾಗಿದೆ. ಕಾಮಗಾರಿಯ ಹಿನ್ನೆಲೆಯಲ್ಲಿ ಅಕ್ಟೋಬರ್ 31 ರವರೆಗೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಹಗಲಿನ ವೇಳೆ ಭಾಗಶಃ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ ಎಂದು ಕೆಎಸ್‍ಇಬಿ ತಿಳಿಸಿದೆ.


ಅಕ್ಟೋಬರ್ 14 ರಿಂದ ಆರಂಭವಾಗಿರುವ ಕಾಮಗಾರಿ ಪ್ರತಿದಿನ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಸಂಬಂಧಪಟ್ಟ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಗೆ ಅಡಚಣೆ ಉಂಟಾಗಬಹುದು. ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಕೆಎಸ್‍ಇಬಿ ಅಧಿಕಾರಿಗಳು ಸೂಚಿಸಿದ್ದಾರೆ.

ಎಂಟು ವಿದ್ಯುತ್ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ವ್ಯತ್ಯಯ:

ನವೀಕರಣ ಕಾಮಗಾರಿಯಿಂದ ಜಿಲ್ಲೆಯ ನಾಲ್ಕು 110 ಕೆ.ವಿ. ಉಪಕೇಂದ್ರಗಳು ಹಾಗೂ ನಾಲ್ಕು 33 ಕೆ.ವಿ. ಉಪಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಗೆ ತಾತ್ಕಾಲಿಕ ಅಡಚಣೆ ಉಂಟಾಗುವ ಸಾಧ್ಯತೆಯಿದೆ.

110 ಕೆ.ವಿ. ಉಪಕೇಂದ್ರಗಳು:

ವಿದ್ಯಾನಗರ, ಮುಳ್ಳೇರಿಯ, ಕುಬಣೂರು, ಮಂಜೇಶ್ವರ

33 ಕೆ.ವಿ. ಉಪಕೇಂದ್ರಗಳು:

ಅನಂತಪುರ, ಕಾಸರಗೋಡು ಟೌನ್, ಬದಿಯಡ್ಕ, ಪೆರ್ಲ

ಈ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಭಾಗಶಃ ವಿದ್ಯುತ್ ವ್ಯತ್ಯಯ ಉಂಟಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯುತ್ ವ್ಯವಸ್ಥೆ ಬಲಪಡಿಸಲು ಕ್ರಮ:

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆ ಹಾಗೂ ಕಡಿಮೆ ವೊಲ್ಟೇಜ್ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಮೈಲಾಟಿ-ವಿದ್ಯಾನಗರ ಫೀಡರ್‍ನ ಸಾಮಥ್ರ್ಯ ಹೆಚ್ಚಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ನವೀಕರಣದಿಂದ ವಿದ್ಯುತ್ ಪ್ರಸರಣ ವ್ಯವಸ್ಥೆ ಸುಧಾರಿಸಿ, ವೋಲ್ಟೇಜ್ ಸಮಸ್ಯೆ ನಿವಾರಣೆಗೆ ನೆರವಾಗುವ ನಿರೀಕ್ಷೆಯಿದೆ.

ಕಾಮಗಾರಿ ನಡೆಯುವ ದಿನಗಳಲ್ಲಿ ವಿದ್ಯುತ್ ಅವಲಂಬಿತ ಉದ್ಯಮಗಳು, ವ್ಯಾಪಾರ ಸಂಸ್ಥೆಗಳು ಹಾಗೂ ಮನೆಗಳ ಗ್ರಾಹಕರು ಮುನ್ನೆಚ್ಚರಿಕೆ ವಹಿಸುವಂತೆ ಕೆಎಸ್‍ಇಬಿ ಮನವಿ ಮಾಡಿದೆ. ಮೈಲಾಟಿ ಲೈನ್ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯ ಮೂಲಕ ಈ ಮಾಹಿತಿ ನೀಡಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries