HEALTH TIPS

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ: ಗಡಿನಾಡಿನ ಪ್ರತಿಭೆ ಶರಣ್ಯಾ ಪಿ. ಬಂಗೇರ ಸಾಧನೆ

ಗಂಗೂಬಾಯಿ ಹಾನಗಲ್ ಮೈಸೂರು ವಿಶ್ವವಿದ್ಯಾಲಯದಿಂದ ವಿದ್ವತ್ ಪದವಿ ಪಡೆದ ಬಹುಮುಖ ಪ್ರತಿಭೆ

ಮಂಜೇಶ್ವರ: ಭರತನಾಟ್ಯ, ಯಕ್ಷಗಾನ, ಚಿತ್ರಕಲೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಡಿನಾಡಿನ ಪ್ರತಿಭೆ ಶರಣ್ಯಾ ಪಿ. ಬಂಗೇರ ಅವರು ಗಂಗೂಬಾಯಿ ಹಾನಗಲ್ ಮೈಸೂರು ವಿಶ್ವವಿದ್ಯಾಲಯ ನಡೆಸಿದ 2026ನೇ ಸಾಲಿನ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ನೃತ್ಯ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದಾರೆ.


ಶಾಲೆಗೆ ಸೇರುವ ಮೊದಲೇ ನಾಟ್ಯಾಭ್ಯಾಸ ಆರಂಭಿಸಿದ್ದ ಶರಣ್ಯಾ, ನಾಟ್ಯಗುರು ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಅವರ ನಾಟ್ಯಶಾಲೆಯಲ್ಲಿ ಕಳೆದ 14 ವರ್ಷಗಳಿಂದ ಭರತನಾಟ್ಯ ಕಲಿಯುತ್ತಿದ್ದಾರೆ. ಜೂನಿಯರ್, ಸೀನಿಯರ್, ವಿದ್ವತ್ ಪೂರ್ವ ಹಾಗೂ ಅಂತಿಮ ವಿದ್ವತ್ ಪರೀಕ್ಷೆಗಳಲ್ಲಿ ವಿಶಿಷ್ಟ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ.

ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ವತಿಯಿಂದ ನೀಡಲಾಗುವ ಸಿಸಿಆರ್‌ಟಿ (CCRT) ವಿದ್ಯಾರ್ಥಿವೇತನ ಪ್ರಶಸ್ತಿಯನ್ನೂ ಶರಣ್ಯಾ ಪಡೆದಿದ್ದಾರೆ.

ಯಕ್ಷಗಾನ ಕ್ಷೇತ್ರದಲ್ಲಿಯೂ ಅಶ್ವಥ್ ಮಂಜನಾಡಿ ಅವರ ಶಿಷ್ಯೆಯಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಲವು ಬಾರಿ ಸ್ಪರ್ಧಿಸಿರುವ ಅವರು, ವಿವಿಧೆಡೆ ಯಕ್ಷಗಾನ ಪ್ರದರ್ಶನಗಳನ್ನು ನೀಡಿ ಕಲಾರಸಿಕರ ಮೆಚ್ಚುಗೆ ಗಳಿಸಿದ್ದಾರೆ.

ಚಿತ್ರಕಲೆಯಲ್ಲಿಯೂ ಆಸಕ್ತಿ ಹೊಂದಿರುವ ಶರಣ್ಯಾ, ಆನಂದಾಶ್ರಮ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಹರೀಶ್ ಅವರ ಮಾರ್ಗದರ್ಶನದಲ್ಲಿ ಡ್ರಾಯಿಂಗ್ ಜೂನಿಯರ್ ಮತ್ತು ಸೀನಿಯರ್ ಗ್ರೇಡ್ ಪರೀಕ್ಷೆಗಳನ್ನು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಿರುವ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 94 ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 97 ಅಂಕಗಳನ್ನು ಗಳಿಸಿದ್ದಾರೆ. ಪ್ರಸ್ತುತ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿನಿಯಾಗಿ ತಾಂತ್ರಿಕ ಶಿಕ್ಷಣ ಮುಂದುವರಿಸುತ್ತಿದ್ದಾರೆ.

ತಲಪಾಡಿಯ ಶ್ರೀ ದುರ್ಗಾ ಪ್ರಸಾದಿತ ಹಿರಿಯ ಪ್ರಾಥಮಿಕ ಶಾಲೆ, ಆನಂದಾಶ್ರಮ ಪ್ರೌಢಶಾಲೆ ಹಾಗೂ ಪರಿಜ್ಞಾನ ಪದವಿಪೂರ್ವ ಕಾಲೇಜಿನ ಹಳೆಯ ವಿದ್ಯಾರ್ಥಿನಿಯಾಗಿರುವ ಶರಣ್ಯಾ, ಕಲಾರಂಗದಲ್ಲಿ ಮಾಡಿದ ಸಾಧನೆಗಾಗಿ ಹಲವು ಪುರಸ್ಕಾರಗಳನ್ನು ಪಡೆದಿದ್ದಾರೆ. ಜಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅವರಿಗೆ ‘ತುಳುನಾಡ ಸಿರಿ ಪುರ್ಪ’ ಬಿರುದು ನೀಡಿ ಗೌರವಿಸಲಾಗಿದೆ.

ತಲಪಾಡಿ ಬಜಂಗ್ರೆಯ ಪುರುಷೋತ್ತಮ್ ಎನ್. ಬಂಗೇರ ಹಾಗೂ ಲೀಲಾವತಿ ದಂಪತಿಯ ಪುತ್ರಿಯಾಗಿರುವ ಶರಣ್ಯಾ ಅವರ ಸಾಧನೆ ಗಡಿನಾಡಿನ ಕಲಾಪ್ರತಿಭೆಗಳಿಗೆ ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾಭ್ಯಾಸದ ಜೊತೆಗೆ ವಿವಿಧ ಕಲಾಪ್ರಕಾರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಅವರ ಸಾಧನೆಗೆ ಅಭಿನಂದನೆಗಳು ವ್ಯಕ್ತವಾಗಿವೆ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries