ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯಿತಿ, ಐ.ಸಿ.ಡಿ.ಎಸ್ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಡಿಎಸ್ ಸಹಯೋಗದೊಂದಿಗೆ ಪೋಷಣ್ ಮಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಶಂಕರ ಉದ್ಘಾಟಿಸಿ ಮಾತನಾಡಿ, ಮಕ್ಕಳು ಮತ್ತು ಗರ್ಭಿಣಿಯರು ಸೂಕ್ತ ಪೌಷ್ಟಿಕ ಆಹಾರವನ್ನು ಸೇವಿಸುವುದು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಅತ್ಯಗತ್ಯ. ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕಾಂಶ ಮತ್ತು ಆರೋಗ್ಯ ಜಾಗೃತಿ ತಲುಪಿಸುವ ಕೆಲಸ ನಿರಂತರವಾಗಿ ನಡೆಯಬೇಕು. ಪ್ರತಿಯೊಬ್ಬರೂ ಪೋಷಣ್ ಅಭಿಯಾನದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಚಾಯಿತಿ ಕ್ಷೇಮ ಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ರಜನಿ ಸಂದೀಪ್, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ ಹಾಗೂ ವಿವಿಧ ವಾರ್ಡ್ಗಳ ಜನಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಐ.ಸಿ.ಡಿ.ಎಸ್ ಮೇಲ್ವಿಚಾರಕರು ಸ್ವಾಗತಿಸಿ, ಸಿ.ಡಿ.ಎಸ್ ಅಧ್ಯಕ್ಷೆ ಸುಲೋಚನ ವಂದಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಸಿ.ಡಿ.ಎಸ್ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಅಪರೂಪದ ಹಾಗೂ ಪೌಷ್ಟಿಕ ತರಕಾರಿ/ಆಹಾರ ಪದಾರ್ಥಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

.jpg)
