HEALTH TIPS

ಮಾಸಿಕ ಲಂಚ ಪ್ರಕರಣ: ಪಿಣರಾಯಿ ವಿಜಯನ್ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

 ಕೊಚ್ಚಿ: ಮಾಸಿಕ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ವಿಜಿಲೆನ್ಸ್ ತನಿಖೆಗೆ ಆದೇಶಿಸಿದ ಏಕಸದಸ್ಯ ಪೀಠದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ಪಿಣರಾಯಿ ವಿಜಯನ್ ಸೇರಿದಂತೆ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.


ವಿಜಿಲೆನ್ಸ್ ಎಫ್‌ಐಆರ್ ದಾಖಲಿಸಲು ಏಕಸದಸ್ಯ ಪೀಠ ನೀಡಿದ್ದ ಆದೇಶದ ವಿರುದ್ಧದ ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ತಮ್ಮ ವಾದವನ್ನು ಆಲಿಸದೆ ಏಕಸದಸ್ಯ ಪೀಠ ಆದೇಶ ನೀಡಿದೆ ಹಾಗೂ ಆ ಆದೇಶ ಕಾನೂನುಬದ್ಧವಾಗಿಲ್ಲ ಎಂಬುದು ಅರ್ಜಿದಾರರ ವಾದವಾಗಿತ್ತು. ರಾಜ್ಯ ಸರ್ಕಾರವೂ ಅರ್ಜಿದಾರರ ಪರವಾದ ನಿಲುವನ್ನು ವ್ಯಕ್ತಪಡಿಸಿತ್ತು.

ಆದರೆ, ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಬಾರದು ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ವಾದಿಸಿತ್ತು. ಈ ನಿಲುವನ್ನು ಪರಿಗಣಿಸಿದ ನ್ಯಾಯಾಲಯವು ಅರ್ಜಿಗಳನ್ನು ತಿರಸ್ಕರಿಸಿದೆ.

ಇದರಿಂದ ಮಾಸಿಕ ಪಡಿ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಪರ ನಿಲುವು ತಳೆದಿದ್ದ ರಾಜ್ಯ ಸರ್ಕಾರಕ್ಕೂ ನ್ಯಾಯಾಲಯದ ತೀರ್ಪಿನಿಂದ ಹಿನ್ನಡೆಯಾಗಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries