ನವದೆಹಲಿ: ಬಳಸಿದ ಅಡುಗೆ ಎಣ್ಣೆಯ ಮರುಬಳಕೆಯಿಂದ ಉಂಟಾಗುವ ಆರೋಗ್ಯ ಮತ್ತು ಪರಿಸರ ಹಾನಿಗಳನ್ನು ತಡೆಗಟ್ಟಲು ಸಮಗ್ರ ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್. ಈ. ಸುಧೀಂದ್ರ ಆಗ್ರಹಿಸಿದರು.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರನ್ನು ಬುಧವಾರ ಇಲ್ಲಿ ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿದರು.
ಬಳಸಿದ ಅಡುಗೆ ಎಣ್ಣೆಯ ಮರುಬಳಕೆ ನಿಯಂತ್ರಿಸಬೇಕು. ಅದರ ಸಂಗ್ರಹ ಮತ್ತು ವಿಲೇವಾರಿಗೆ ಪರಿಣಾಮಕಾರಿ ವ್ಯವಸ್ಥೆ ರೂಪಿಸಬೇಕು. ಭಾರತದ ಪರ್ಯಾಯ ಮತ್ತು ನವೀಕರಿಸಬಹುದಾದ ಇಂಧನ ವಲಯ ಬಲಪಡಿಸಲು ಅದನ್ನು ಬಯೊಡೀಸೆಲ್ ಆಗಿ ಪರಿವರ್ತಿಸುವುದನ್ನು ಉತ್ತೇಜಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.


