ಕಾಸರಗೋಡು: ಅಸೌಖ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಮಾಹಿತಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳು ನೀಡಿದ ದೂರಿನನ್ವಯ ವೆಳ್ಳರಿಕುಂಡ್ ಠಾಣೆ ಪೆÇಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಬಾಲಕಿಯ ಸ್ನೇಹಿತನಾದ 18ರ ಹರೆಯದ ಯುವಕನ ವಿರುದ್ಧ ಪೆÇೀಕ್ಸೋ ಕೇಸು ದಾಖಲಿಸಲಾಗಿದೆ. ಈತನನ್ನು ಪತ್ತೆಹಚ್ಚಲು ಪೆÇಲೀಸರು ತನಿಖೆ ಆರಂಭಿಸಿದ್ದಾರೆ. ಅನಾರೋಗ್ಯ ಕಂಡುಬಂದ ಹಿನ್ನೆಲೆಯಲ್ಲಿ ಬಾಲಕಿ ಆಸ್ಪತ್ರೆಗೆ ತಲುಪಿದ್ದಳು. ವೈದ್ಯರು ತಪಾಸಣೆ ನಡೆಸಿದಾಗ ಬಾಲಕಿ 4 ತಿಂಗಳ ಗರ್ಭಿಣಿಯಾಗಿರುವುದಾಗಿ ತಿಳಿದು ಬಂದಿತ್ತು.


