ನವದೆಹಲಿ (PTI): ಕಳೆದ ವರ್ಷ ಡಿಸೆಂಬರ್‌ನಲ್ಲಿ ಅರಬ್ ಸಂಯುಕ್ತ ಸಂಸ್ಥಾನದಲ್ಲಿ (ಯುಎಇ) ಮೃತಪಟ್ಟಿದ್ದ ಭಾರತದ ಪ್ರಜೆಯ ಮೃತದೇಹದ ಅಂತ್ಯಕ್ರಿಯೆಯನ್ನು ಅಲ್ಲಿಯೇ ನಡೆಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.
ಮೃತದೇಹವನ್ನು ಸ್ವದೇಶಕ್ಕೆ ತರಲು ನಿರ್ದೇಶನ ನೀಡಬೇಕು ಎಂದು ಮೃತನ ತಾಯಿ ಸಲ್ಲಿ ಸಿದ್ದ ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿತು.
ನ್ಯಾಯಮೂರ್ತಿ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರನ್ನು ಒಳಗೊಂಡ ನ್ಯಾಯಪೀಠದ ಎದುರು ಸರ್ಕಾರ ಈ ಕುರಿತ ವರದಿಯನ್ನು ಸಲ್ಲಿಸಿತು.
ಬಳಿಕ ನ್ಯಾಯಾಲಯವು, ಈ ವಿಚಾರದ ಬಗ್ಗೆ ವಿಚಾರಣೆ ಮುಂದುವರಿಸುವುದರಲ್ಲಿ ಅರ್ಥವಿಲ್ಲ. ಅರ್ಜಿದಾರರು ಪರಿಹಾರ ಕೋರಿ ಅರ್ಜಿ ಸಲ್ಲಿಸುವುದಾದರೆ ಭಾರತ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ತಿಳಿಸಿತು.



