HEALTH TIPS

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

 ನವದೆಹಲಿ: 'ಫ್ಲೈದುಬೈ' (Flydubai) ವಿಮಾನದ ಕಾಕ್‌ಪಿಟ್‌ನಲ್ಲಿ ನಡೆದ ಮಾರಾಮಾರಿ ಬಳಿಕ ಕ್ಯಾಪ್ಟನ್ ಸ್ಮಿತ್ ಮಚ್ಚರ್ ತೋರಿದ ಧೈರ್ಯದ ಕುರಿತು ಇಡೀ ದೇಶವೇ ಪ್ರಶಂಸೆ ವ್ಯಕ್ತಪಡಿಸುತ್ತಿದ್ದರೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತ್ರ ಏನನ್ನೂ ಮಾತನಾಡಿಲ್ಲ. ಇದನ್ನು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಪ್ರಶ್ನಿಸಿದ್ದಾರೆ. 


ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಬರೆದುಕೊಂಡಿದ್ದು, ವಿವಿಧ ವಿಷಯಗಳ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ, ಮಚ್ಚರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ. ಭಾರತೀಯ ಪೈಲಟ್‌ನ ಧೈರ್ಯವನ್ನು "ಸೋನಿಯಾ ಕುಟುಂಬ" ಯಾಕೆ ಗುರುತಿಸಲಿಲ್ಲ ಅಥವಾ ಶ್ಲಾಘಿಸಲಿಲ್ಲ ಎಂದೂ ಅವರು ಕೇಳಿದ್ದಾರೆ.

ಪ್ರತಿಯೊಂದು ವಿಷಯದ ಬಗ್ಗೆಯೂ ಮಾತನಾಡುವ ರಾಹುಲ್ ಗಾಂಧಿ, ಕ್ಯಾಪ್ಟನ್ ಸ್ಮಿತ್ ಮಚ್ಚರ್ ಬಗ್ಗೆ ಮಾತನಾಡುವುದು ಹಾಗಿರಲಿ, ಕನಿಷ್ಠ ಸಾಮಾಜಿಕ ಜಾಲತಾಣದಲ್ಲಿ ಒಂದೇ ಒಂದು ಪೋಸ್ಟ್ ಕೂಡ ಹಾಕಿಲ್ಲ. ಸೋನಿಯಾ ಕುಟುಂಬಕ್ಕೆ ಏನಾಗಿದೆ? ಭಾರತ ಮತ್ತು ಭಾರತೀಯರ ಕುರಿತಾದ ಒಳ್ಳೆಯ ವಿಷಯಗಳನ್ನು ಅವರು ಏಕೆ ಗುರುತಿಸುವುದಿಲ್ಲ? ಒಬ್ಬ ಭಾರತೀಯ ತನ್ನ ಧೈರ್ಯಕ್ಕಾಗಿ ಪ್ರಶಂಸೆ ಪಡೆಯುವುದನ್ನು ಅವರಿಗೆ ಯಾಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ? ಎಂದು ಕಿಡಿಕಾರಿದ್ದಾರೆ.

ಮಚ್ಚರ್ ಅವರ ಕಾರ್ಯದ ಬಗ್ಗೆ ರಾಹುಲ್ ಗಾಂಧಿ ಯಾವುದೇ ಸಾರ್ವಜನಿಕ ಹೇಳಿಕೆ ನೀಡದಿರುವ ಕುರಿತು ಬಿಜೆಪಿ ನಾಯಕರು ಟೀಕೆ ಮಾಡುತ್ತಿರುವ ನಡುವೆಯೇ ರೆಡ್ಡಿ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಕೂಡ ಪೈಲಟ್‌ನ ಧೈರ್ಯದ ಕುರಿತು ಗಾಂಧಿಯವರ ಮೌನವನ್ನು ಪ್ರಶ್ನಿಸಿದ್ದಾರೆ.

ದುಬೈನಿಂದ ಟೆಲ್ ಅವೀವ್‌ಗೆ ಪ್ರಯಾಣಿಸುತ್ತಿದ್ದ 'ಫ್ಲೈದುಬೈ' ವಿಮಾನ FZ1073 ರಲ್ಲಿ, ಸಹ-ಪೈಲಟ್‌ನೊಂದಿಗಿನ ಮಾರಾಮಾರಿ ನಂತರ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಗಾಯಗೊಂಡಿದ್ದರೂ ಕಾಕ್‌ಪಿಟ್ ಬಾಗಿಲನ್ನು ತೆರೆಯುವಲ್ಲಿ ಯಶಸ್ವಿಯಾಗುವ ಮೂಲಕ ವಿಮಾನವು ಸೌದಿ ಅರೇಬಿಯಾದ ತಬುಕ್‌ನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಇದರಿಂದಾಗಿ ನೂರಾರು ಪ್ರಯಾಣಿಕರು ಹಾಗೂ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಂತರ ಮಚ್ಚರ್ ಅವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಯುಎಇಗೆ (UAE) ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಮಚ್ಚರ್ ಮತ್ತು ಅವರ ಕುಟುಂಬದೊಂದಿಗೆ ಮಾತನಾಡಿದ್ದು, ಘಟನೆಯ ಸಮಯದಲ್ಲಿ ಪೈಲಟ್ ತೋರಿದ ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries