HEALTH TIPS

ಚಿನ್ಮಯ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಸಂಭ್ರಮದ ಚಾಲನೆ

ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಅನಾವರಣಕ್ಕೆ ವೇದಿಕೆ; ಜಿಲ್ಲಾ ಸ್ಪೆಷಲ್ ಮೊಬೈಲ್ ಸ್ಕ್ವಾಡ್ ಉಪ ಪೊಲೀಸ್ ಅಧೀಕ್ಷಕ ಉತ್ತಮ್‍ದಾಸ್ ಟಿ. ಅವರಿಂದ ಉದ್ಘಾಟನೆ

ಕಾಸರಗೋಡು: ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ, ದೈಹಿಕ ಕ್ಷಮತೆ ಹಾಗೂ ಸ್ಪರ್ಧಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಕಾಸರಗೋಡಿನ ಚಿನ್ಮಯ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಸಂಭ್ರಮದ ಚಾಲನೆ ದೊರೆಯಿತು.


ಅಕ್ಟೋಬರ್ 30 ಮತ್ತು 31 ರಂದು ನಡೆಯಲಿರುವ ಕ್ರೀಡಾಕೂಟವನ್ನು ಕಾಸರಗೋಡು ಜಿಲ್ಲಾ ಸ್ಪೆಷಲ್ ಮೊಬೈಲ್ ಸ್ಕ್ವಾಡ್‍ನ ಉಪ ಪೊಲೀಸ್ ಅಧೀಕ್ಷಕ ಉತ್ತಮ್‍ದಾಸ್ ಟಿ. ಅವರು ಉದ್ಘಾಟಿಸಿದರು. ಚಿನ್ಮಯ ಮಿಷನ್ ಕೇರಳ ಘಟಕದ ಮುಖ್ಯಸ್ಥ ಸ್ವಾಮಿ ವಿವಿಕ್ತಾನಂದ ಸರಸ್ವತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕ್ರೀಡೆ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ:

ಅಧ್ಯಕ್ಷತೆ ವಹಿಸಿ ಮಾಡಿದ ಸ್ವಾಮಿ ವಿವಿಕ್ತಾನಂದ ಸರಸ್ವತಿ ಅವರು, ಕ್ರೀಡಾಕೂಟವು ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ಪ್ರತಿಭೆ ಹಾಗೂ ಕ್ರೀಡಾ ಸಾಮಥ್ರ್ಯವನ್ನು ಪ್ರದರ್ಶಿಸಲು ಉತ್ತಮ ಅವಕಾಶವಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬರೂ ಸ್ಪರ್ಧೆಯಲ್ಲಿ ವಿಜೇತರಾಗಲು ಸಾಧ್ಯವಾಗದಿದ್ದರೂ, ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅತ್ಯಂತ ಮುಖ್ಯ. ಗೆಲುವು ಮತ್ತು ಸೋಲಿಗಿಂತ ಭಾಗವಹಿಸುವಿಕೆ, ಶಿಸ್ತು ಹಾಗೂ ಕ್ರೀಡಾಸ್ಫೂರ್ತಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಿಕ್ಷಣದೊಂದಿಗೆ ಕ್ರೀಡೆಗೂ ಆದ್ಯತೆ ಅಗತ್ಯ:

ಮುಖ್ಯ ಅತಿಥಿಯಾಗಿ ಮಾತನಾಡಿದ ಉಪ ಪೊಲೀಸ್ ಅಧೀಕ್ಷಕ ಉತ್ತಮ್‍ದಾಸ್ ಟಿ. ಅವರು, ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ಸಮಾನ ಪ್ರಾಮುಖ್ಯತೆ ನೀಡುತ್ತಿರುವ ಚಿನ್ಮಯ ವಿದ್ಯಾಲಯದ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ವಿದ್ಯಾರ್ಥಿಗಳ ಜೀವನದಲ್ಲಿ ದೈಹಿಕ ಕ್ಷಮತೆ ಅತ್ಯಂತ ಮುಖ್ಯವಾಗಿದ್ದು, ಕ್ರೀಡಾಕೂಟವು ತಮ್ಮ ಸಾಮಥ್ರ್ಯವನ್ನು ಗುರುತಿಸಿಕೊಳ್ಳಲು ಮತ್ತು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದರು. ಶಾಲೆ ಹಾಗೂ ಶಿಕ್ಷಕರು ಒಟ್ಟಾಗಿ ಮಕ್ಕಳನ್ನು ಉತ್ತಮ ವ್ಯಕ್ತಿತ್ವವುಳ್ಳವರನ್ನಾಗಿ ರೂಪಿಸುವಲ್ಲಿ ವಹಿಸುತ್ತಿರುವ ಪಾತ್ರವನ್ನು ಅವರು ಮೆಚ್ಚಿಕೊಂಡರು.

ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಪೂರಕ:

ಶಾಲಾ ಪ್ರಾಂಶುಪಾಲ ಟಿ.ವಿ. ಸುಕುಮಾರನ್ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡಾ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಕ್ರೀಡೆಯ ಮೂಲಕ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಯುತ್ತದೆ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾಲಯದ ಉಪಪ್ರಾಂಶುಪಾಲ ಅಭಿಜಿತ್ ಎಂ.ಕೆ., ಮುಖ್ಯ ಶಿಕ್ಷಕಿಯರಾದ ಪೂರ್ಣಿಮಾ ಎಸ್.ಆರ್., ಸಿಂಧು ಶಶೀಂದ್ರನ್, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ, ಪೆÇೀಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎರಡು ದಿನಗಳ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದು, ತಮ್ಮ ಪ್ರತಿಭೆ ಪ್ರದರ್ಶಿಸಲು ಸಜ್ಜಾಗಿದ್ದಾರೆ. ಶಾಲಾ ಆವರಣದಲ್ಲಿ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries