HEALTH TIPS

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: ಗಡಿನಾಡು ಕಾಸರಗೋಡಿಗೆ ಮತ್ತೆ ನಿರಾಸೆ; ಕನ್ನಡಿಗರ ಅಸಮಾಧಾನ

 ಕಾಸರಗೋಡು: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಗಡಿನಾಡು ಕಾಸರಗೋಡಿನ ಬಗ್ಗೆ ಕರ್ನಾಟಕ ಸರ್ಕಾರ ತೋರಿದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಗಡಿನಾಡ ಕನ್ನಡಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 


ಕಾಸರಗೋಡು ಭೌಗೋಳಿಕವಾಗಿ ಕೇರಳದಲ್ಲಿದ್ದರೂ ಇಲ್ಲಿನ ಕನ್ನಡಿಗರು ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ಕರ್ನಾಟಕವನ್ನೇ ಆಶ್ರಯಿಸಿಕೊಂಡಿದ್ದಾರೆ. ಆದರೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕಾಸರಗೋಡಿನ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಈ ಬಾರಿಯೂ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬಂದಿದೆ.

ಗಡಿನಾಡು ಕಾಸರಗೋಡಿನ ಕನ್ನಡಿಗರು ಭಾಷಾ ಸಮಸ್ಯೆ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವೂ ಅವರ ಸಮಸ್ಯೆಗಳನ್ನು ಕಡೆಗಣಿಸುತ್ತಿರುವುದು ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿದೆ.

2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರನ್ನು ಆಯ್ಕೆ ಮಾಡಲು ಕರ್ನಾಟಕ ಸರ್ಕಾರ ಎರಡು ಪ್ರಮುಖ ಸಮಿತಿಗಳನ್ನು ರಚಿಸಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಚಿಸಿದ ತಜ್ಞರನ್ನೊಳಗೊಂಡ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಗೆ ಗಡಿನಾಡಿನ ಪ್ರತಿನಿಧಿಯಾಗಿ ಕಾಸರಗೋಡಿನ ಚೆನ್ನಯ್ಯ ಅವರನ್ನು ನೇಮಕ ಮಾಡಲಾಗಿತ್ತು. ಆದರೆ, ನೇಮಕಗೊಂಡ ಒಂದೆರಡು ದಿನಗಳಲ್ಲೇ ಅವರನ್ನು ಸಮಿತಿಯಿಂದ ಕೈಬಿಡುವ ಮೂಲಕ ಗಡಿನಾಡ ಕನ್ನಡಿಗರಿಗೆ ಆಘಾತ ನೀಡಲಾಗಿತ್ತು.

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರನ್ನು ಆಯ್ಕೆ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಆಯ್ಕೆ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯನ್ನು ರಚಿಸಲಾಗಿತ್ತು.

ಇದೀಗ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲೂ ಗಡಿನಾಡ ಕನ್ನಡಿಗರನ್ನು ಕಡೆಗಣಿಸುವ ಮೂಲಕ ಕಾಸರಗೋಡನ್ನು ಮತ್ತೊಮ್ಮೆ ನಿರ್ಲಕ್ಷಿಸಲಾಗಿದೆ ಎಂಬ ಅಸಮಾಧಾನ ಗಡಿನಾಡ ಕನ್ನಡಿಗರಿಂದ ವ್ಯಕ್ತವಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries