HEALTH TIPS

ಜ್ಞಾನೇಶ್ ಕುಮಾರ್ ವಿರುದ್ಧ ಬೃಹತ್ ಪ್ರತಿಭಟನೆಗೆ ಮುಂದಾದ ಅಂಬೇಡ್ಕರ್ ಮೊಮ್ಮಗ

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ 28ರಂದು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಸಮೀಪ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಂಚಿತ ಬಹುಜನ ಆಘಾಡಿ (ವಿಬಿಎ) ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್‌ ತಿಳಿಸಿದ್ದಾರೆ.

ಧಮ್ಮಚಕ್ರ ಪ್ರವರ್ತನ ದಿನ ಮತ್ತು ಅಶೋಕ ವಿಜಯದಶಮಿಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಆರ್‌ಎಸ್‌ಎಸ್‌ ಮತ್ತು ಕೇಂದ್ರ ಬಿಜೆಪಿ ಸರ್ಕಾರ, ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರೊಂದಿಗೆ ಸೇರಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಕ್ರಮವಾಗಿ ಹಸ್ತಕ್ಷೇಪ ಮಾಡುತ್ತಿದೆ' ಎಂದು ಆರೋಪಿಸಿದ್ದಾರೆ.

'ಅಕ್ಟೋಬರ್ 28ರಂದು ಮುಂಬೈನ ಸಿಎಸ್‌ಎಂಟಿ ನಿಲ್ದಾಣದ ಹೊರಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಬೇಕು' ಎಂದು ಅವರು ಮನವಿ ಮಾಡಿದ್ದಾರೆ.

'ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ನಾವು ಬಿಡುವುದಿಲ್ಲ ಎಂಬ ಸಂದೇಶವನ್ನು ಸಾರೋಣ. ಈ ಸಂದೇಶವನ್ನು ತಲುಪಿಸಲು ನಾವೆಲ್ಲರೂ ಒಂದಾಗಬೇಕು. ಆ ಮೂಲಕ ನಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು' ಎಂದು ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries