HEALTH TIPS

ಬಿಜೆಪಿಗೆ ಸೇರ್ಪಡೆಗೊಂಡು ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಟಿ ಕೋಯಲ್

ಕೋಲ್ಕತ್ತ: ಬೆಂಗಾಲಿ ಚಿತ್ರ ನಟಿ, ಕೋಯಲ್ ಮಲ್ಲಿಕ್ ಎಂದೇ ಖ್ಯಾತರಾದ ರುಕ್ಮಿಣಿ ಮಲ್ಲಿಕ್ ಅವರು ಮುಂಬರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.  


ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದರು.

ಅದಕ್ಕೂ ಮುನ್ನ ಬೆಳಿಗ್ಗೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರ ರಾಜೀನಾಮೆಯಿಂದಲೇ ತೆರವಾದ ಕ್ಷೇತ್ರಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಹಿರಿಯ ಬಂಗಾಳಿ ನಟ ರಂಜಿತ್ ಮಲ್ಲಿಕ್ ಅವರ ಮಗಳಾಗಿರುವ ರುಕ್ಮಿಣಿ, ಇದೇ ವರ್ಷ ಏಪ್ರಿಲ್ 6ರಿಂದ ಜುಲೈ 16ರವರೆಗೆ ಅಲ್ಪಾವಧಿಗೆ ರಾಜ್ಯಸಭಾ ಸದಸ್ಯರಾಗಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಸೋಲಾದ ಬೆನ್ನಲ್ಲೇ ಅವರು ಪಕ್ಷ ತೊರೆದಿದ್ದರು.

ಕೋಯೆಲ್ ಮಲ್ಲಿಕ್ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಪಕ್ಷದ ಪಶ್ಚಿಮ ಬಂಗಾಳ ಘಟಕದ ಪ್ರಧಾನ ಕಾರ್ಯದರ್ಶಿ ಶಶಿ ಅಗ್ನಿಹೋತ್ರಿ, ಮಲ್ಲಿಕ್ ಅವರು ಸೋಮವಾರ ರಾಜ್ಯಸಭೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

'ರಾಜ್ಯಸಭಾ ಸದಸ್ಯೆಯಾಗುವುದು ಹಾಗೂ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಅವಕಾಶ ದೊರೆಯುವುದು ನನಗೆ ಗೌರವದ ಸಂಗತಿ' ಎಂದು ಮಲ್ಲಿಕ್ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ 12 ರಾಜ್ಯಸಭಾ ಸ್ಥಾನಗಳಿಗೆ ಅಕ್ಟೋಬರ್ 16ರಂದು ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries