ಕಾಸರಗೋಡು: ಪಶುಸಂಗೋಪನಾ ಇಲಾಖೆಯ ವತಿಯಿಂದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬ್ಲಾಕ್‍ನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ರಾತ್ರಿ ಕಾಲದ ಪಶುವೈದ್ಯಕೀಯ ಚಿಕಿತ್ಸಾ ಯೋಜನೆಯನ್ವಯ ವಾಹನ ಚಾಲಕ ಕಮ್ ಅಟೆಂಡರ್ ಹುದ್ದೆಗಾಗಿ ನೇಮಕಾತಿ ನಡೆಯಲಿರುವುದು.
ಈ ನಿಟ್ಟಿನಲ್ಲಿ ಅಕ್ಟೋಬರ್ 12ರಂದು ಬೆಳಗ್ಗೆ 11.30ಕ್ಕೆ ಕಾಸರಗೋಡು ಸಿವಿಲ್ ಸ್ಟೇಷನ್‍ನಲ್ಲಿರುವ ಜಿಲ್ಲಾ ಪಶುಸಂಗೋಪನಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಏಳನೇ ತರಗತಿ ಉತ್ತೀರ್ಣ ಹಾಗೂ ಲೈಟ್ ವೆಹಿಕಲ್ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ(04994 224624)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

